LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

 ಉತ್ತರ ಪ್ರದೇಶದ ಮಹಾ ಕುಂಭ ಮೇಳಕ್ಕೆ ಭರದಿಂದ ಸಿದ್ಧತೆ; 7 ಸುತ್ತಿನ ಭದ್ರತೆಯ ವ್ಯವಸ್ಥೆ

ಪ್ರಯಾಗ್​ ರಾಜ್​: ಉತ್ತರ ಪ್ರದೇಶದಲ್ಲಿ 12 ವರ್ಷಗಳಿಗೆ ಒಮ್ಮೆ ನಡೆಯುವ ಮಹಾ ಕುಂಭ ಮೇಳಕ್ಕೆ ಭರದಿಂದ ಸಿದ್ಧತೆ ಸಾಗಿದ್ದು, ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಹಾ ಕುಂಭಮೇಳಕ್ಕಾಗಿ ಪ್ರಯಾಗ್​ರಾಜ್​ಗೆ ಭೇಟಿ ನೀಡುವ 40 ಕೋಟಿಗೂ ಹೆಚ್ಚು ಜನರಿಗೆ 7 ಸುತ್ತಿನ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.


ನಗರ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ರೈಲು ನಿಲ್ದಾಣ, ಬಸ್​ ನಿಲ್ದಾಣ, ವಿಮಾನ ನಿಲ್ದಾಣ ಹಾಗೂ ಇತರ ಪ್ರಮುಖ ಮಾರ್ಗದಲ್ಲಿ ತಾತ್ಕಾಲಿಕ ಪೊಲೀಸ್​ ಠಾಣೆ ಮತ್ತು ಚೆಕ್​ಪೋಸ್ಟ್ ಗಳನ್ನು ಸ್ಥಾಪಿಸಲು ಸ್ಥಳೀಯ ಅಧಿಕಾರಿಗಳು ನಿರ್ಧರಿಸಿದ್ದಾರೆ.


ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಬಿಡಿಡಿ ಮತ್ತು ಎಎಸ್ ಚೆಕ್ ತಂಡಗಳನ್ನು ನಿಯೋಜಿಸುವ ಮೂಲಕ ಭದ್ರತೆಯನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಘಟಕಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಇರಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST