LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

 ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ: 29,568 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಧಾರವಾಡ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾಯು ಮಾರ್ಚ 18, 2026 ರಿಂದ ಏಪ್ರೀಲ್ 02, 2026 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15 ಗಂಟೆವರೆಗೆ ಪರೀಕ್ಷೆಗಳು ಜರುಗಲಿವೆ.

ಜಿಲ್ಲೆಯಲ್ಲಿ ಒಟ್ಟು 105 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ. 26,171 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 960 ಬಾಹ್ಯ ಅಭ್ಯರ್ಥಿಯಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 2295 ವಿದ್ಯಾರ್ಥಿಗಳು ಪುನರಾವರ್ತಿತವಾಗಿ, 142 ಪುನರಾವರ್ತಿತ ಬಾಹ್ಯ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಕಲಂ 144 ರನ್ವಯ ನಿμÉೀದಾಜ್ಞೆ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲು 200 ಮೀಟರ್ ಅಂತರದಲ್ಲಿರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ. ಜಿಲ್ಲಾ ಹಂತದಲ್ಲಿ ಜಾಗೃತದಳದ ಅಧಿಕಾರಿಗಳೆಂದು ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರನ್ನು ನೇಮಕ ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿüಕಾರಿಗಳಿಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಪೆÇೀಲಿಸ್ ಬಂದೋಬಸ್ತಗಳನ್ನು ನಿರ್ವಹಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ಪರೀಕ್ಷಾ ದಿನಗಳಂದು ಹೆಸ್ಕಾಂ ಅಧಿಕಾರಿಗಳಿಗೆ ತಡೆರಹಿತ ವಿದ್ಯುತ್ ಪೂರೈಸಲು ಸೂಚಿಸಲಾಗಿದೆ. ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ-2026 ರ ಪರೀಕ್ಷೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಧಾರವಾಡ ಇವರ ಹಂತದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ವೆಬ್‍ಕಾಸ್ಟಿಂಗ್ ನಡೆಸಲಾಗುವುದು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರನ್ನು, ಪ್ರಶ್ನೆಪತ್ರಿಕೆಪಾಲಕರನ್ನು, ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ನಿರೀಕ್ಷರನ್ನು ಮಂಡಳಿಯ ಆದೇಶದಂತೆ ನೇಮಕಮಾಡಲಾಗಿದೆ. ಪರೀಕ್ಷೆಯನ್ನು ಶಾಂತ, ಸುವ್ಯವಸ್ಥಿತ ಹಾಗೂ ಪಾರದರ್ಶಕತೆಯಿಂದ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್