LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

 ಕಾಲಘಟ್ಟ ಚಿತ್ರದ ಮೊದಲ ಪೋಸ್ಟರ್

     ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ 'ಕಾಲಘಟ್ಟ' ಚಿತ್ರದ ಮೊದಲ ಪೋಸ್ಟರ್ ಮಂತ್ರಾಲಯದಲ್ಲಿ  ಅನಾವರಣಗೊಂಡಿತು.

      ಯುಗಾದಿ ಹಬ್ಬದ ದಿನದಂದು  ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಚಿತ್ರತಂಡದವರನ್ನು ಆಶೀರ್ವದಿಸಿದರು.


     'ಕಾಲಘಟ್ಟ' ಇದು ಎರಡು ಕಾಲಘಟ್ಟಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ ಸೊಗಡಿನ ಜಾನಪದ ಕಲೆಯ ಬಗ್ಗೆ ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ. ಸದ್ಯ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ನಂಜನಗೂಡು ಹಾಗೂ ಕಳಲೆಯಲ್ಲಿ ಚಿತ್ರೀಕರಣ ನಡೆದಿದೆ.


     ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.  "ಕಾಲಘಟ್ಟ' ನನ್ನ ನಿರ್ದೇಶನದ ಎರಡನೇ ಚಿತ್ರ. ಇದಕ್ಕೂ ಮೊದಲು 'ಖಾಲಿ ಡಬ್ಬ' ಎಂಬ‌ ಚಿತ್ರವನ್ನು ನಿರ್ದೇಶಿಸಿದ್ದೆ. ಅದು ಕೂಡ ತೆರೆಗೆ ಬರಲು ಸಿದ್ದವಾಗಿದೆ" ಎಂದು ನಿರ್ದೇಶಕ ಪ್ರಕಾಶ್ ಅಂಬಳೆ ತಿಳಿಸಿದ್ದಾರೆ. ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸದಾಶಿವ ಹಿರೇಮಠ ಹಾಗೂ ರಾಜ್ ಕಡೂರ್  ಛಾಯಾಗ್ರಹಣ, ಎ.ಎಂ.ನೀಲ್ ಸಂಗೀತ ನಿರ್ದೇಶನ,  ವೆಂಕಿ ಯು.ಡಿ.ವಿ ಸಂಕಲನ ಹಾಗೂ ಮಾಸ್ ಮಾದ ಸಾಹಸ ನಿರ್ದೇಶನವಿದೆ.


     ಅಭಿಲಾಶ್ ಹಾಗೂ ನಿತಿನ್ 'ಕಾಲಘಟ್ಟ' ದ ನಾಯಕರಾಗಿ, ಮೇಘ ಮತ್ತು ಖುಷಿ ನಾಯಕಿಯರಾಗಿ ನಟಿಸಿದ್ದಾರೆ. ಹಿರಿಯ ಕಲಾವಿದರಾದ ಶೋಭ್ ರಾಜ್, ಭವ್ಯ, ಪ್ರಶಾಂತ್ ಹಾಗೂ ಅನೇಕ ರಂಗಭೂಮಿ ಕಲಾವಿದರ ತಾರಾಬಳಗದಲ್ಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್