LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿ.ಕೆ. ಶಿವಕುಮಾರ್ ಅವರ ಆಸ್ತಿ 1,413 ಕೋಟಿ ರೂ.ಗಳಿಗಿಂತ ಹೆಚ್ಚು: ಎಡಿಆರ್ ವರದಿ

ನವದೆಹಲಿ, ಮಾರ್ಚ್​ 20: ಭಾರತದ ಅತ್ಯಂತ ಶ್ರೀಮಂತ ಹಾಗೂ ಬಡ ಶಾಸಕರು ಯಾರು ಎನ್ನುವ ವರದಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್​ ಬಿಡುಗಡೆ ಮಾಡಿದೆ. ಎಡಿಆರ್ ವರದಿಯ ಪ್ರಕಾರ, ಮುಂಬೈನ ಘಾಟ್ಕೋಪರ್ ಪೂರ್ವದ ಬಿಜೆಪಿ ಶಾಸಕ ಪರಾಗ್ ಶಾ ಭಾರತದ ಅತ್ಯಂತ ಶ್ರೀಮಂತ ಶಾಸಕ. ಇವರ ಆಸ್ತಿಯ ಮೌಲ್ಯ ಸುಮಾರು 3400 ಕೋಟಿ ರೂ. ಅವರ ನಂತರ ಕರ್ನಾಟಕದ ಕನಕಪುರದ ಕಾಂಗ್ರೆಸ್ ಶಾಸಕ . ಅತಿ ಕಡಿಮೆ ಆಸ್ತಿ ಹೊಂದಿರುವ ಶಾಸಕರು ಯಾರು ಎಂಬುದನ್ನು ತಿಳಿಯಿರಿ.

ಪರಾಗ್ ಶಾ ಅತ್ಯಂತ ಶ್ರೀಮಂತ ಶಾಸಕ: ಎಡಿಆರ್ ವರದಿಯು ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವ ಮೊದಲು ಸಲ್ಲಿಸಿದ ಅಫಿಡವಿಟ್‌ಗಳಲ್ಲಿರುವ ಮಾಹಿತಿಯನ್ನೇ ಇದು ಹೇಳುತ್ತದೆ. ಈ ಸಂಶೋಧನೆಯು 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 4092 ಶಾಸಕರನ್ನು ಒಳಗೊಂಡಿದೆ. ಈ ವರದಿಯ ಪ್ರಕಾರ, ಬಿಜೆಪಿಯ ಪರಾಗ್ ಶಾ ಅತ್ಯಂತ ಶ್ರೀಮಂತ ಶಾಸಕ. ಪಶ್ಚಿಮ ಬಂಗಾಳದ ನಿರ್ಮಲ್ ಕುಮಾರ್ ಧಾರಾ ಅತಿ ಕಡಿಮೆ ಆಸ್ತಿ ಹೊಂದಿರುವ ಶಾಸಕರಾಗಿದ್ದಾರೆ. ಅವರ ಬಳಿ ಕೇವಲ 1700 ರೂ. ಇದೆ. ರ್ಮಲ್ ಕುಮಾರ್ ಧಾರಾ ಪಶ್ಚಿಮ ಬಂಗಾಳದ ಇಂಡಸ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.


ಕರ್ನಾಟಕದ ಶಾಸಕರು ಹೊಂದಿರುವ ಆಸ್ತಿ ಎಷ್ಟಿದೆ?: ಕರ್ನಾಟಕದ ಶಾಸಕರು ಒಟ್ಟಾರೆಯಾಗಿ 14,179 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು, ಇದು ದೇಶದಲ್ಲೇ ಅತಿ ಹೆಚ್ಚು. ಮಹಾರಾಷ್ಟ್ರ ಶಾಸಕರ ಆಸ್ತಿ 12,424 ಕೋಟಿ ರೂ. ಆಂಧ್ರಪ್ರದೇಶದ ಶಾಸಕರು 11,323 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅತ್ಯಂತ ಕಡಿಮೆ ಸಂಪತ್ತು ಹೊಂದಿರುವ ರಾಜ್ಯಗಳಲ್ಲಿ ತ್ರಿಪುರ, ಮಣಿಪುರ ಮತ್ತು ಪುದುಚೇರಿ ಸೇರಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ