LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ತಾಯಿನುಡಿಯೊಂದಿಗೆ ಮಕ್ಕಳಿಗಿರುವ ಸೇತುವೆಯನ್ನು ಕಡಿದು ಹಾಕಲಿರುವ 'ಸೇತುಬಂಧ ಕಾರ್ಯಕ್ರಮ :  ಅಲ್ಲಮಪ್ರಭು ಬೆಟ್ಟದೂರು

ಬಳ್ಳಾರಿ. ಜೂ. 16: ಸೇತುಬಂಧ ಕಾರ್ಯಕ್ರಮದ ಪರೀಕ್ಷೆಯಲ್ಲಿ ಇಂಗ್ಲಿಷ್‌ನಲ್ಲಿ ಉತ್ತರಿಸಿದರೆ ಮಾತ್ರ 'ಎ' ಗ್ರೇಡ್ ಮತ್ತು ಕನ್ನಡದಲ್ಲಿ ಸರಿಯಾದ ಉತ್ತರ ಬರೆದರೂ 'ಬಿ' ಗ್ರೇಡ್  ನೀಡುತ್ತಿರುವುದು ಕೆಲವೊಂದು ಪತ್ರಿಕೆಗಳಲ್ಲಿ ವರದಿಯಾಗಿದೆ.  ಶಿಕ್ಷಣ ಇಲಾಖೆಯ ಈ ಕನ್ನಡ ಭಾಷಾ ವಿರೋಧಿ ಮತ್ತು ತಾರತಮ್ಯದ ಕ್ರಮವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (AISEC), ಕರ್ನಾಟಕ  ಘಟಕವು ಅತ್ಯಂತ ಉಗ್ರವಾಗಿ ಖಂಡಿಸುತ್ತದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (AISEC) ಕರ್ನಾಟಕ ಅಧ್ಯಕ್ಷರಾದ ಅಲ್ಲಮಪ್ರಭು ಬೆಟ್ಟದೂರು ಕಿಡಿ ಕಾರಿದ್ದಾರೆ.
 ಈ ಕುರಿತು  ಪತ್ರಿಕಾ ಹೇಳಿಕೆಯನ್ನು ನೀಡಿರುವ ಬೆಟ್ಟದೂರು  ಸರ್ಕಾರವು ದಶಕಗಳಿಂದ 5ನೇ ತರಗತಿಯಿಂದ ಇಂಗ್ಲಿಷ್ ಬೋಧಿಸುವ ನೀತಿಯನ್ನು ಜಾರಿಯಲ್ಲಿಟ್ಟು, ಒಂದನೇ ತರಗತಿಯಿಂದಲೇ ಗುಣಮಟ್ಟದ ಇಂಗ್ಲಿಷ್ ಕಲಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇಂಗ್ಲಿಷ್ ಬಾರದ ವಿದ್ಯಾರ್ಥಿಗಳು ಕನ್ನಡದಲ್ಲಿ ಉತ್ತರಿಸುವುದು ಅಪರಾಧವೇ? ಇಂಗ್ಲಿಷ್ ನಲ್ಲಿ ಮಕ್ಕಳು ಹಿಂದೆ ಬೀಳಲು ಕಾರಣ ಯಾರು?  ಇಂಗ್ಲಿಷ್ ಭಾಷಾ ಶಿಕ್ಷಕರನ್ನು ನೇಮಕ ಮಾಡದ ಸರ್ಕಾರ, ಈಗ ತನ್ನ ವೈಫಲ್ಯದ ಹೊಣೆಯನ್ನು ಅಮಾಯಕ ವಿದ್ಯಾರ್ಥಿಗಳ ಮೇಲೆ ಹೊರಿಸಿ ಅವರನ್ನು ಶಿಕ್ಷಿಸುತ್ತಿರುವುದು ಅಕ್ಷಮ್ಯ. ಸರ್ಕಾರಿ ಶಾಲೆಗಳಲ್ಲಿ ಅವಶ್ಯವಿರುವಷ್ಟು ಇಂಗ್ಲಿಷ್,  ಕನ್ನಡ ಭಾಷಾ ಶಿಕ್ಷಕರನ್ನು  ನೇಮಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರಗಳು ಇಂತಹ  ಅವೈಜ್ಞಾನಿಕ, ಶಿಕ್ಷಣ ವಿರೋಧಿ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವುದು ಖಂಡನೀಯ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
"ಈ ನೀತಿಯು ವಿದ್ಯಾರ್ಥಿಗಳು ಕನ್ನಡದಲ್ಲಿ ಕಲಿಯುವುದನ್ನು ನಿರುತ್ಸಾಹಗೊಳಿಸಿ, ಅವರನ್ನು ಬಲವಂತವಾಗಿ ಕೆ.ಪಿ.ಎಸ್ (KPS) ಮ್ಯಾಗ್ನೆಟ್ ಶಾಲೆಗಳತ್ತ ತಳ್ಳುವ ಹುನ್ನಾರವಾಗಿದೆ. ಇದು ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳಿಗೆ ಮರಣ ಶಾಸನವಾಗಿ ಪರಿಣಮಿಸಲಿದೆ.
ತಕ್ಷಣವೇ ಈ ತಾರತಮ್ಯದ ನೀತಿಯನ್ನು ಹಿಂಪಡೆಯಬೇಕು ಎಂದು ಅವರು ಶಿಕ್ಷಣ ಇಲಾಖೆಯನ್ನು ಮತ್ತು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್