LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

 ನಮ್ರತಾ ಗೌಡ ಈಗ ಮಹಾನ್



     ನಾಗಿಣಿ ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದಿರುವ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ 'ಮಹಾನ್' ಚಿತ್ರದಲ್ಲಿ ನಟಿಸುತ್ತಿದ್ದಾರೆ.

     ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ 'ಮಹಾನ್' ಚಿತ್ರದ ನಾಯಕನಾಗಿ ಜನಪ್ರಿಯ ನಟ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದು, ನಮ್ರತಾ ಗೌಡ ಪ್ರಮುಖಪಾತ್ರದಲ್ಲಿ

ಬಣ್ಣಹಚ್ಚಿದ್ದಾರೆ.

    'ಮಹಾನ್' ಚಿತ್ರದ ಕುರಿತು ನಟ ನಮ್ರತಾ ಗೌಡ "ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು 'ಮಹಾನ್' ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ

ಬದುಕು-ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರದ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ. ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್,  ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ" ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್