LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಪಾಕಿಸ್ತಾನದ ಶೆಲ್​ ದಾಳಿ: ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರ

ನವದೆಹಲಿ: ಪಾಕಿಸ್ತಾನದ ಶೆಲ್​ ದಾಳಿಯಿಂದ ಹಾನಿಗೊಳಗಾದ ಗಡಿ ಪ್ರದೇಶದ ಮನೆಗಳಿಗೆ ಹೆಚ್ವುವರಿಯಾಗಿ ಪರಿಹಾರ ನೀಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಇತ್ತೀಚಿಗೆ ಈ ಹೆಚ್ಚುವರಿ ಪರಿಹಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಈ ಬೆನ್ನಲ್ಲೇ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ, ಹಾನಿಗೊಳಗಾದ 2,060 ಮನೆಗಳಿಗೆ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದಾರೆ ಎಂದು ಪಿಐಬಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಳೆದ ವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಈ ವೇಳೆ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ಸಂಪೂರ್ಣ ಹಾನಿಗೊಳಗಾದ ಪ್ರತಿ ಮನೆಗೆ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಹಾನಿಗೊಳಗಾದ ಪ್ರತಿ ಮನೆಗೆ 1 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದರು.


ಅದರಂತೆ ಇದೀಗ ಕೇಂದ್ರ ಗೃಹ ಸಚಿವಾಲಯ, ಪ್ರಧಾನಿ ಮೋದಿ ಅವರ ಘೋಷಣೆಯಂತೆ ಪರಿಹಾರವನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಪೂಂಚ್​ ಹೊರತಾಗಿ ಪಂಜಾಬ್‌ನ ಗಡಿ ಪ್ರದೇಶದಲ್ಲಿಯೂ ಇದೇ ರೀತಿ ಪರಿಹಾರ ನೀಡಲಾಗುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST