LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ

ಉಡುಪಿ,

ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿರುವ ಮೊಬೈಲ್ ಅಂಗಡಿ ಮತ್ತು ಹಾರ್ಡ್‌ವೇರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಹಾರ್ಡ್‌ವೇರ್ ಅಂಗಡಿಯಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಬೆಂಕಿ ತೀವ್ರವಾಗಿ ಹರಡಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಪರಿಣಾಮವಾಗಿ ಮೊಬೈಲ್ ಅಂಗಡಿಯಲ್ಲಿದ್ದ ಬೆಲೆಬಾಳುವ ಹ್ಯಾಂಡ್‌ಸೆಟ್‌ಗಳು ಹಾಗೂ ಹಾರ್ಡ್‌ವೇರ್ ವಸ್ತುಗಳು ಬೆಂಕಿಯ ಕೆನ್ನಾಲಗೆಗೆ ಆಹುತಿಯಾಗಿವೆ. ಈ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಜನನಿಬಿಡ ಪ್ರದೇಶವಾದ್ದರಿಂದ ಬೆಂಕಿ ನಂದಿಸುವ ಕಾರ್ಯ ಸವಾಲಾಗಿತ್ತು. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್