ಹಸಿರು ಕ್ರಾಂತಿ ವರದಿ ಬೆಂಗಳೂರು
ನಗರದ ಮಾಗಡಿ ರಸ್ತೆಯಲ್ಲಿರುವ ಸರ್ಕಾರಿ ಅನುದಾನಿತ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲೆಯ ರಾಷ್ಟ್ರೀಯ ಸಂಪನ್ಮೂಲ ಶಿಕ್ಷಕರಾದ ಸುರೇಂದ್ರ ಸಾಮಗಾರ ಅವರನ್ನು ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರಕ್ಕೆ ಗೌರವ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರದ ರಾಜ್ಯಾಧ್ಯಕ್ಷೆ ಸುಶೀಲಾ ಎಂ.ಎಸ್ ಪ್ರಕಟಣೆ ಮೂಲಕ ಆದೇಶ ಹೊರಡಿಸಿದ್ದಾರೆ.
ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಗುಡ್ಡೆಹೋಟೆಲ್ ನಾಡದ ಸುರೇಂದ್ರವರು ಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಬೆಂಗಳೂರಿಗೆ ವಲಸೆ ಬರುವ ಕುಟುಂಬದವರ ಶಾಲೆಯಿಂದ ಹೊರಗುಳಿದ ಮತ್ತು ಶಾಲೆ ಬಿಟ್ಟು ದುಡಿಯುತ್ತಿರುವ ಮಕ್ಕಳನ್ನು ತಮ್ಮ ಬಿಡುವಿನ ವೇಳೆಯಲ್ಲಿ ಸಮೀಕ್ಷೆ ನಡೆಸಿ ಅವರನ್ನು ಸರ್ಕಾರಿ ಶಾಲೆಗೆ ಸೇರಿಸುವ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸುವ, ನಿರಂತರವಾಗಿ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ.