LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ರಾಜ್ಯದಲ್ಲಿ ನಾಳೆಯೂ ವರುಣನ  ಅಬ್ಬರ

ಬೆಂಗಳೂರು, ಅಕ್ಟೋಬರ್​ 10: ರಾಜ್ಯದಲ್ಲಿ ನಾಳೆಯೂ ವರುಣನ  ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ, ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಯೆಲ್ಲೋ​ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್​, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಂದ ನಾಳೆ ವರುಣ ದೂರ ಇರಲಿದ್ದು, ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇಲ್ಲಿ ಕಂಡುಬರಲಿದೆ.

ರಾಜಧಾನಿ ಬೆಂಗಳೂರಲ್ಲೂ ನಾಳೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಶೇಕಡಾ 91ರಷ್ಟು ಮಳೆಯಾಗುವ ಸಾಧ್ಯತೆ ಅಂದಾಜಿಸಲಾಗಿದ್ದು, ಗುಡುಗು ಸಹಿತ ವರುಣನ ಆಗಮನವಾಗಲಿದೆ. ನಗರದ ಗರಿಷ್ಠ ತಾಪಮಾನವು 26 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಗಾಳಿಯ ವೇಗ ಗಂಟೆಗೆ 14 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್