LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, 

ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಂದ ಅಧಿಕೃತ ಸುತ್ತೋಲೆ:

ಮೇ 10 ರಂದು ನಾಗಮಲೆ ಅರಣ್ಯ ಪ್ರದೇಶ, ಎಂ. ಎಂ. ಹಿಲ್ಸ್ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿರುವ ಹಿನ್ನಲೆಯಲ್ಲಿ ಹಾಗೂ ವನ್ಯಪ್ರಾಣಿಗಳು ಸಂಚರಿಸುವ ಸಂಚಾರ ಪಥಗಳಲ್ಲಿ ಸಾರ್ವಜನಿಕರ ಹಾಗೂ ಟ್ರೆಕ್ಕರ್‌ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿರತೆ, ಹುಲಿ, ಆನೆ, ಕರಡಿ ಹಾಗೂ ಇತರೆ ವನ್ಯಪ್ರಾಣಿಗಳು ಸಂಚರಿಸುವ ಹಾಗೂ ಸದರಿ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಸಂಭವವಿರುವ ಎಲ್ಲಾ ಸಂಚಾರ ಪಥಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೂಚನೆ ಅನ್ವಯವಾಗಲಿದೆ ಎಂದು ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಹೊಸ ಎಸ್​ಒಪಿ;

ಇನ್ನುಚಾರಣ ಚಟುವಟಿಕೆಗಳಿಗೆ ಹೊಸ ಎಸ್​ಒಪಿ ಪಾಲಿಸುವುದು ಕಡ್ಡಾಯವಾಗಲಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಪಥಗಳಲ್ಲಿ ಚಟುವಟಿಕೆ ನಿಲ್ಲಿಸಲು ನಿರ್ಧರಿಸಲಾಗಿದೆ. ನಿಯಮ ಪಾಲನೆಗೆ ಸಿದ್ಧತೆ ಮಾಡಿಕೊಂಡ ನಂತರವಷ್ಟೇ ಚಾರಣಕ್ಕೆ ಅವಕಾಶ ಸಿಗಲಿದ್ದು, ಈ ಬಗ್ಗೆ ಮುಖ್ಯ ವನ್ಯಜೀವಿ ಪರಿಪಾಲಕರು ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ. ಪರಿಸರ ಪ್ರವಾಸೋದ್ಯಮ ಮಂಡಳಿ ಮೇಲ್ವಿಚಾರಣೆಯ ಪಥಗಳಿಗೂ ಇದು ಅನ್ವಯವಾಗಲಿದ್ದು, ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್