LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

೧ ಕೋಟಿ ರೂ. ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಗೆ ಶಾಸಕ ಲಕ್ಷö್ಮಣ ಸವದಿ ಭೂಮಿ ಪೂಜೆ

ಅಥಣಿ:  ಗ್ರಾಮ ಪಂಚಾಯತ್ ಕಟ್ಟಡವು ಗ್ರಾಮೀಣ ಆಡಳಿತದ ಕೇಂದ್ರವಾಗಿದ್ದು, ಜನಸಾಮಾನ್ಯರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಆಧುನಿಕ ಸೌಕರ್ಯಗಳ ಅಗತ್ಯವಿದೆ. ಹೊಸ ಕಟ್ಟಡ ನಿರ್ಮಾಣದಿಂದ ಗ್ರಾಮಸ್ಥರಿಗೆ ಸರಕಾರದ ವಿವಿಧ ಯೋಜನೆಗಳ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ ಎಂದು ಶಾಸಕ ಲಕ್ಷö್ಮಣ ಸವದಿ ಹೇಳಿದರು
ಅಥಣಿ ತಾಲೂಕಿನ ಸಂಕೊನಹಟ್ಟಿ ಗ್ರಾಮ ಪಂಚಾಯತ (ಅಥಣಿ ಗ್ರಾಮೀಣ) ೧ ಕೋಟಿ ರೂ.ಗಳ ನೂತನ ಕಟ್ಟಡ ಕಾಮಗರಿಗೆ ಮಂಗಳವಾರ ಶಾಸಕ ಲಕ್ಷö್ಮಣ ಸವದಿ ಭೂಮಿ ನೇರವೇರಿಸಿ ಮಾತನಾಡಿದ ಅವರು ಈ ಯೋಜನೆ ಗ್ರಾಮಾಭಿವೃದ್ಧಿಗೆ ಉತ್ತೇಜನ ನೀಡುವುದರ ಜೊತೆಗೆ, ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ಸಹಕಾರಿಯಾಗಲಿದೆ. ಕಟ್ಟಡದಲ್ಲಿ ಕಚೇರಿ ಕೊಠಡಿಗಳು, ಸಭಾಂಗಣ, ದಾಖಲೆ ಸಂಗ್ರಹಣೆ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು. ಗ್ರಾಮಾಭಿವೃದ್ಧಿ ಕಾರ್ಯಗಳಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಗ್ರಾಮವು ಅಭಿವೃದ್ಧಿಯ ದಾರಿಯಲ್ಲಿ ಸಾಗುತ್ತದೆ ಎಂದು ಹೇಳಿದರು
ಈ ವೇಳೆ ಮಾಜಿ ಗ್ರಾಂ.ಪ ಅಧ್ಯಕ್ಷ ಶಂಕರ ಗಡದೆ, ಮಾಜಿ ಸದಸ್ಯರಾದ ಬರಮು ಸೋನಕರ, ಸಂಜಯ ಹಣಮಾಪುರೆ, ಅರುಣ ಬಾಸಿಂಗಿ, ಪರಸರಾಮ ಪೋಳ, ಪುಟ್ಟು ಸಿಂಧೆ, ಅಣ್ಣಪ್ಪ ಬಸರಿಖೋಡಿ, ಅಶೋಕ ಕೌಜಲಗಿ, ಮುಖಂಡರಾದ ಸುರೇಶ ಘೋಳಪ್ಪನವ, ಶಿವಾನಂದ ದಿವಾನಮಳ, ರಾಮಣ್ಣ ಧರಿಗೌಡರ, ನರಸು ಬಡಕಂಬಿ, ಅಧಿಕಾರಿಗಳಾದ ಶಿವಾನಂದ ಕಲ್ಲಾಪೂರ, ಪ್ರವೀಣ ಹುನಸಿಕಟ್ಟಿ, ಬೀರಪ್ಪ ಕಡಗಂಚಿ ಸೇರಿದಂತೆ ಗ್ರಾಮ ಪಂಚಾಯತ ಸಿಬ್ಬಂಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್