LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ಕಾಡಿಗೆ ಬೆಂಕಿ, ಕಳ್ಳಬೇಟೆ ತಡೆ ಶಿಬಿರಗಳ ಸ್ಫೋಟ! : 10 ಎಕರೆ ಅರಣ್ಯ ಭಸ್ಮ, ಹೈಅಲರ್ಟ್ : ಎನ್‌ಕೌಂಟ್‌ ಪ್ರಕರಣದ ಸುತ್ತ ಕಾವೇರಿದ ರಾಜಕೀಯ: ಸ್ಥಳಕ್ಕೆ ಮಾನವ ಹಕ್ಕು ಆಯೋಗ ಹಾಗೂ ಬಿಜೆಪಿ ನಿಯೋಗ ಭೇಟಿ

ಚಾಮರಾಜನಗರ :  ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಶೂಟೌಟ್‌ನಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಪ್ರತೀಕಾರವಾಗಿ ಕಳ್ಳಬೇಟೆಗಾರರು ಅರಣ್ಯ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ಸರಣಿ ಅಕ್ರಮ ಕೃತ್ಯಗಳನ್ನು ಎಸಗುತ್ತಿದ್ದಾರೆ.

news_1787217429_0_137.webp

ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮಗಳ ಬಫರ್ ವಲಯದಲ್ಲಿರುವ ಶಿಲುಬೆಪುರ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಸಂಪೂರ್ಣವಾಗಿ ಭಸ್ಮವಾಗಿದೆ. ಅಲ್ಲದೆ, ಕೊತ್ತನೂರು ವಲಯದ ಮಿಂಚಿನರೆಹಳ್ಳ ಹಾಗೂ ಜಾಗೇರಿ ಬಳಿಯ ಅಕ್ರಮ ಬೇಟೆ ತಡೆ ಶಿಬಿರಗಳನ್ನು ಡೈನಮೈಟ್ ಮತ್ತು ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟಿಸಿ ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಕಚೇರಿಗಳಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

news_1787217429_1_347.webp

ಇನ್ನೊಂದೆಡೆ, ಶೂಟೌಟ್ ಪ್ರಕರಣದ ತನಿಖೆಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದೆ. ಇದೇ ವೇಳೆ, ಮಾಜಿ ಸಚಿವ ಎನ್. ಮಹೇಶ್ ನೇತೃತ್ವದ ಬಿಜೆಪಿ ಸತ್ಯಶೋಧನಾ ಸಮಿತಿಯು ಮೃತಪಟ್ಟ ಕುಮಾರ್, ಆಂತೋಣಿಸ್ವಾಮಿ ಮತ್ತು ಪೀಟರ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಮೃತರ ಕುಟುಂಬಸ್ಥರು ತಮ್ಮವರು ಬೇಟೆಗಾರರಲ್ಲ, ಹಸುಗಳನ್ನು ಹುಡುಕಲು ಹೋಗಿದ್ದಾಗ ಅರಣ್ಯ ಇಲಾಖೆ ಅಮಾನುಷವಾಗಿ ಗುಂಡಿಕ್ಕಿ ಕೊಂದಿದೆ ಎಂದು ಆರೋಪಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ