LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

೧೦ ಕೋಟಿ ಮಾದಕವಸ್ತು ಮುಕ್ತ ಪ್ರತಿಜ್ಞೆ: ಪಿಎಂ ಶ್ರೀ ಕೆಪಿಎಸ್‌ಸಿ ಸೊರಗಾಂವದಲ್ಲಿ ಮೆಗಾ ಅಭಿಯಾನ

 

ಮುಧೋಳ: ಆ.೨೦: ತಾಲೂಕಿನ ಸೊರಗಾಂವ ಗ್ರಾಮದ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (ಕೆಪಿಎಸ್‌ಸಿ) ’೧೦ ಕೋಟಿ ಮಾದಕವಸ್ತು ಮುಕ್ತ ಪ್ರತಿಜ್ಞೆ’ ಎಂಬ ಮೆಗಾ ಅಭಿಯಾನವನ್ನು ಆ.೧೯ರಂದು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯ ಬಿ.ಆರ್. ಶಿರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿನಿಧಿಗಳಾದ ಕುಮಾರಿ ಲಕ್ಷ್ಮಿ ಅಕ್ಕ, ಕುಮಾರ್ ಶೇಖರ್ ಅಣ್ಣ ಹಾಗೂ ಸೋಮಶೇಖರ್ ಅಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗೆ ಮಾದಕವಸ್ತುಗಳ ಸೇವನೆಯಿಂದ ಉಂಟಾಗುವ ದು?ರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಮಾದಕವಸ್ತುಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಉತ್ತಮ ಹಾಗೂ ಮಾದಕವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಪ್ರತಿಜ್ಞೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಯುವಜನತೆ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗದಂತೆ ಕುಟುಂಬ, ಶಾಲೆ ಮತ್ತು ಸಮಾಜ ಒಗ್ಗೂಡಿ ನಿರಂತರವಾಗಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಹೇಳಿದರು. ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು, ಶಿಸ್ತುಬದ್ಧ ಹಾಗೂ ಆರೋಗ್ಯಕರ ಜೀವನ ನಡೆಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಮಾದಕವಸ್ತು ಮುಕ್ತ ಸಮಾಜ ನಿರ್ಮಾಣದ ಸಂಕಲ್ಪಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅಭಿಯಾನವು ಜಾಗೃತಿ ಮತ್ತು ದೃಢ ಸಂಕಲ್ಪದೊಂದಿಗೆ ಯಶಸ್ವಿಯಾಗಿ ನೆರವೇರಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ