LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪುಣ್ಯತಿಥಿಯಂದು ಕ್ಯಾರೆಟ್ ಹಲ್ವಾ ಸೇವಿಸಿ ಮಕ್ಕಳು ಸೇರಿ 100 ಮಹಿಳೆಯರು ಅಸ್ವಸ್ಥ!

ಅಮ್ರೋಹಾ (ಉತ್ತರ ಪ್ರದೇಶ): ವ್ಯಕ್ತಿಯೊಬ್ಬರ ಪುಣ್ಯತಿಥಿಯ ದಿನದಂದು ಕ್ಯಾರೆಟ್ ಹಲ್ವಾ ಸೇವಿಸಿ ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಹೊರತು ಉಳಿದವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.


ಅಮ್ರೋಹಾ ಜಿಲ್ಲೆಯ ದಿದೌಲಿ ಗ್ರಾಮದ ನಿವಾಸಿ ಕುಲದೀಪ್ ಗುಪ್ತಾ ಎಂಬುವರು ತಮ್ಮ ತಂದೆಯ ಪುಣ್ಯತಿಥಿಯ ನಿಮಿತ್ತವಾಗಿ ಶುಕ್ರವಾರ ಔತಣಕೂಟ ಆಯೋಜಿಸಿದ್ದರು. ಕ್ಯಾರೆಟ್ ಹಲ್ವಾ ಸೇರಿದಂತೆ ಹಲವು ತಿನಿಸುಗಳನ್ನು ಪುಣ್ಯತಿಥಿಯಲ್ಲಿ ಮಾಡಿಸಿದ್ದರು. ಗ್ರಾಮಸ್ಥರೆಲ್ಲರೂ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ, ಕ್ಯಾರೆಟ್ ಹಲ್ವಾ ತಿಂದ ನಂತರ 100ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಮತ್ತು ತಲೆತಿರುಗುವಿಕೆ ಕಂಡು ಬಂದಿದ್ದು, ತಕ್ಷಣ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಸೇವಿಸಲು ಯೋಗ್ಯವಲ್ಲ ಹಾಲು ಮತ್ತು ಮಾವಾದಿಂದ ಕ್ಯಾರೆಟ್ ಹಲ್ವಾವನ್ನು ತಯಾರಿಸಿರುವುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಘಟನೆಗೆ ಇದೇ ಪ್ರಮುಖ ಕಾರಣವಲ್ಲ. ಕ್ಯಾರೆಟ್ ಹಲ್ವಾ ವಿಷ ಪದಾರ್ಥವಾಗಿ ಪರಿವರ್ತನೆಯಾಗಿರುವ ಸಾಧ್ಯತೆ ಇದ್ದುದರಿಂದ ಇದನ್ನು ಸೇವಿಸಿದ ಹಲವರ ಆರೋಗ್ಯದಲ್ಲಿ ಏರುಪೇರಾಗಿರಬಹುದು. ಕೆಲವರಲ್ಲಿ ವಾಂತಿ, ಹೊಟ್ಟೆ ನೋವು ಮತ್ತು ತಲೆತಿರುಗುವಿಕೆ ಕೂಡ ಕಂಡು ಬಂದಿದೆ. ಪ್ರಸ್ತುತ, ಎಲ್ಲಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್