LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಸನ ಮೂಲಕ ಗಮನ ಸೆಳೆದ ಸಚಿವರು

ಬೆಂಗಳೂರು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶುಕ್ರವಾರ (ಜೂನ್‌ 21) ರಂದು ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು.

ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಪಾಲ್ಗೊಡಿದ್ದು, ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.

ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡಿಕೆ.ಶಿವಕುಮಾರ್ ಅವರು, 'ರೋಗ್ಯಕರ ಮನಸ್ಸು ಆರೋಗ್ಯಕರ ದೇಹದಲ್ಲಿ ನೆಲೆಸುತ್ತದೆ ಎಂಬ ಗಾದೆಯಂತೆ, ಯೋಗವು ದೇಹ, ಮನಸ್ಸು ಮತ್ತು ಚೈತನ್ಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಉತ್ತಮ ಮಾರ್ಗವಾಗಿದೆ. ಅಂತರಾಷ್ಟ್ರೀಯ ಯೋಗ ದಿನದ ಈ ಸಂದರ್ಭದಲ್ಲಿ ಯೋಗವನ್ನು ನಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್