LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಡೆಂಘೀ  ಸೋಂಕು ಉಲ್ಭಣ: 11 ವರ್ಷದ ಬಾಲಕ ಮೃತ

ಬೆಂಗಳೂರು, ಜುಲೈ.06: ರಾಜ್ಯದಲ್ಲಿ ಡೆಂಘೀ  ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ  ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಇನ್ನು ಮತ್ತೊಂದೆಡೆ ಶಿವಮೊಗ್ಗದ ಗಾಂಧಿ ನಗರದ ಮನೆಯಲ್ಲಿ ಝೀಕಾ ವೈರಸ್​ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್​​ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧನಲ್ಲಿ ಜೂನ್​​ 21ರಂದು ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್​ ಮಾಡಲಾಗಿತ್ತು. ಗುರುವಾರ ಕುಟುಂಬದವರು ವೃದ್ಧನನ್ನು ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ವೃದ್ಧ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಡೆಂಘೀ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದೊಳಗೆ ನಾಲ್ಕು ಮಕ್ಕಳು ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲೇ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಕಳೆದ ಜೂನ್ 30 ಹೊಳೆನರಸೀಪುರ ತಾಲೂಕಿನ ದೊಡ್ಡಮಗ್ಗೆಯ 8 ವರ್ಷದ ವರ್ಷಿಕಾ, ಜುಲೈ 1ರಂದು ಅರಕಲಗೂಡು ತಾಲೂಕಿನ 13 ವರ್ಷದ ಅಕ್ಷತಾ ಮೃತಪಟ್ಟಿದ್ರು. ಜುಲೈ 3ರಂದು ಗುಡ್ಡೇನಹಳ್ಳಿಯ 11 ವರ್ಷದ ಕಲಾಶ್ರಿ ಸಾವನಪ್ಪಿದ್ದು, ಜುಲೈ 5 ನಿನ್ನೆ 8 ವರ್ಷದ ಹೊಳೆನರಸೀಪುರದ ದೊಡ್ಡಹಳ್ಳಿ ಗ್ರಾಮದ ಸಮೃದ್ಧಿ ಚಿಕಿತ್ಸೆ ಫಲಕಾರಿಯಾಗದೆ ಉಸಿರು ಚೆಲ್ಲಿದ್ದಾಳೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್