LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

೧೨ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ



ಇಂಡಿ,ಜೂ,೨೨: ಯೋಗವು ಭಾರತದ ಪ್ರಾಚೀನ ಋಷಿ-ಮುನಿಗಳು ಇಡೀ ವಿಶ್ವಕ್ಕೆ ನೀಡಿರುವ ಅಮೂಲ್ಯ ಕೊಡುಗೆಯಾಗಿದ್ದು, ಜೀವನ ನಿತ್ಯೋತ್ಸವವಾಗಲು ಪ್ರತಿಯೊಬ್ಬರೂ ಯೋಗ ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ರವಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ೧೨ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಧೇಶಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಯೋಗವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಇದು ಮನುಷ್ಯನ ಮನಸ್ಸು, ದೇಹ, ಉಸಿರಾಟವನ್ನು ನಿಯಂತ್ರಿಸಿ, ಆಂತರಿಕ ಶಾಂತಿ ಕಾಪಾಡಲು ಸಹಕಾರಿಯಾಗಿದೆ ಎಂದು ಹೇಳಿದರು.
ಶಿಕ್ಷಕ ಶ್ರೀಧರ ಹಿಪ್ಪರಗಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಒತ್ತಡ-ಆತಂಕ ನಿವಾರಿಸಿ, ಏಕಾಗ್ರತೆ, ನೆನಪಿನ ಶಕ್ತಿಯನ್ನು ವೃದ್ಧಿಸಲು ಯೋಗವು ಪರಿಪೂರ್ಣ ಅಭ್ಯಾಸವಾಗಿದೆ ಎಂದು ಹೇಳಿದರು. ಕೆಬಿಎಸ್ ಮುಖ್ಯ ಶಿಕ್ಷಕ ಎಸ್ ಎಸ್ ಬಡಿಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯ ತನ್ನ ಜೀವನವನ್ನು ಯೋಗ ಜೀವನವನ್ನಾಗಿ ಬದಲಾಯಿಸಿಕೊಳ್ಳಬೇಕು. ಯೋಗವು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಸಮತೋಲನದಲ್ಲಿಡುವ ಅದ್ಭುತ ಜೀವನ ಶೈಲಿಯಾಗಿದೆ ಎಂದು ಹೇಳಿದರು.
ದೈಹಿಕ ಶಿಕ್ಷಕ ಎಸ್ ಎಚ್ ತಳವಾರ ಯೋಗಾಭ್ಯಾಸ ಮಾಡಿಸುತ್ತಾ, ವಿವರಣೆ ನೀಡಿದರು. ಕೆಜಿಎಸ್ ಮುಖ್ಯ ಶಿಕ್ಷಕ ಎಸ್ ಬಿ ಕೋಳಿ, ಯುಬಿಎಸ್ ಮುಖ್ಯ ಶಿಕ್ಷಕ ಕೆ ಐ ಮಕಾನದಾರ ಹಾಗೂ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗದವರು, ಮಕ್ಕಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್