Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿಯಲ್ಲಿ ಮೇ 16, 17 ರಂದು 12ನೇ 'ಮೇ ಸಾಹಿತ್ಯ ಮೇಳ': ಅಲ್ಲಮಪ್ರಭು ಬೆಟ್ಟದೂರು

 

 
 

ಕೊಪ್ಪಳ: ಹುಬ್ಬಳ್ಳಿ ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದ 'ನರಗುಂದ-ನವಲಗುಂದ ರೈತ ಬಂಡಾಯ ವೇದಿಕೆ'ಯಲ್ಲಿ ಇದೇ ತಿಂಗಳ 16 (ಶನಿವಾರ) ಮತ್ತು 17ರಂದು (ಭಾನುವಾರ) ಎರಡು ದಿನಗಳ ಕಾಲ 12ನೇ 'ಮೇ ಸಾಹಿತ್ಯ ಮೇಳ' ನಡೆಯಲಿದೆ ಎಂದು ಹಿರಿಯ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಾರಿಯ ಮೇಳದಲ್ಲಿ 'ಸಾಂವಿಧಾನಿಕ ಪ್ರಜಾಸತ್ತೆಯ ಮೇಲಿನ ದಾಳಿ: ಚಹರೆ ಮತ್ತು ಹೊರದಾರಿಗಳು' ಎಂಬ ವಿಷಯದ ಕುರಿತು ಗಂಭೀರ ಚರ್ಚೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಜರುಗಲಿವೆ. ಸಮ ಸಮಾಜದ ನಿರ್ಮಾಣದ ಆಶಯದೊಂದಿಗೆ ಆಯೋಜಿಸಲಾಗಿರುವ ಈ ಮೇಳದಲ್ಲಿ ನಾಡಿನ ಖ್ಯಾತ ಚಿಂತಕರು ಹಾಗೂ ಹೋರಾಟಗಾರರು ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಗದಗದ ಲಡಾಯಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ, ಕವಲಕ್ಕಿಯ ಕವಿ ಪ್ರಕಾಶನ ಹಾಗೂ ಹುಬ್ಬಳ್ಳಿಯ ಮೇ ಸಾಹಿತ್ಯ ಮೇಳ ಬಳಗದ ಸಂಯುಕ್ತ ಆಶ್ರಯದಲ್ಲಿ ಈ ಬೃಹತ್ ಮೇಳ ಆಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಮಾನ ಮನಸ್ಕರು ಪಾಲ್ಗೊಳ್ಳಲಿದ್ದು, ಕೊಪ್ಪಳ ಜಿಲ್ಲೆಯಿಂದಲೂ ನೂರಾರು ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಟ್ಟದೂರು ಅವರು ಮನವಿ ಮಾಡಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ಪ್ರಮುಖ ಚಿಂತಕರು ಹಾಗೂ ಹೋರಾಟಗಾರರಾದ ಟಿ. ರತ್ನಾಕರ, ಸುಖರಾಜ್ ತಾಳಕೇರಿ, ಶರಣಪ್ಪ ಬಾಚಲಾಪುರ, ಗೋವಿಂದರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*