LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಾಕಿಸ್ತಾನ ಭದ್ರತಾ ಪಡೆ ಕಾರ್ಯಚರಣೆಯಲ್ಲಿ 13 ಭಯೋತ್ಪಾದಕರ ಹತ್ಯೆ


ಪೇಶಾವರ(ಪಾಕಿಸ್ತಾನ): ಇಲ್ಲಿನ ಖೈಬರ್​​​​ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆ ವೇಳೆ ಪಾಕಿಸ್ತಾನಿ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 13 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪಾಕಿಸ್ತಾನಿ ಮಿಲಿಟರಿಯ ಮಾಧ್ಯಮ ವಿಭಾಗ ತಿಳಿಸಿದೆ.


ಭದ್ರತಾ ಪಡೆಯಿಂದ ಎಲ್ಲ ಕಾರ್ಯಾಚರಣೆಗಳು ಗುರುವಾರ ಮುಂಜಾನೆ ನಡೆದಿವೆ ಎಂದು ಮಾಧ್ಯಮ ವರದಿ ಹಂಚಿಕೊಂಡಿದೆ. ಮೊದಲ ಕಾರ್ಯಾಚರಣೆಯಲ್ಲಿ, ಬನ್ನು ಜಿಲ್ಲೆಯ ಜಾನಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಇಬ್ಬರು ಭಯೋತ್ಪಾದಕರನ್ನು ಕೊಂದಿ ಹಾಕಿದ್ದಾರೆ. ಉತ್ತರ ವಜಿರಿಸ್ತಾನ್‌ನಲ್ಲಿ ನಡೆದ ಎರಡನೇ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇಲ್ಲಿ ಎಂಟು ಭಯೋತ್ಪಾದಕರು ಗಾಯಗೊಂಡಿದ್ದಾರೆ. ಆದರೆ ಈ ಗುಂಡಿನ ಕಾಳಗದಲ್ಲಿ ಪಾಕಿಸ್ತಾನಿ ಯೋಧ ಮೇಜರ್ ಮುಹಮ್ಮದ್ ಅವೈಸ್ (31) ಮೃತಪಟ್ಟಿದ್ದಾರೆ .


ಮೂರನೇ ಕಾರ್ಯಾಚರಣೆ ದಕ್ಷಿಣ ವಜಿರಿಸ್ತಾನ್‌ನಲ್ಲಿ ನಡೆದಿದೆ. ಸೈನಿಕರು ಆರು ಮಂದಿ ಉಗ್ರರನ್ನು ಕೊಂದರು ಮತ್ತು ಇಲ್ಲಿ ಮತ್ತೆ ಎಂಟು ಮಂದಿ ಭಯೋತ್ಪಾದಕರು ಗಾಯಗೊಂಡಿದ್ದಾರೆ.












ಆಂತರಿಕ ಸಚಿವಾಲಯದ ಇತ್ತೀಚಿನ ಅಂಕಿ - ಅಂಶಗಳ ಪ್ರಕಾರ, ಕಳೆದ 10 ತಿಂಗಳಲ್ಲಿ ವರದಿಯಾದ 1,566 ಭಯೋತ್ಪಾದನಾ ಘಟನೆಗಳಲ್ಲಿ 948 ಘಟನೆಗಳು ಖೈಬರ್ ಪಖ್ತುಂಖ್ವಾದಲ್ಲಿ ನಡೆದಿವೆ. ಇದರ ಪರಿಣಾಮ 583 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್