LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು, ಸೆಪ್ಟೆಂಬರ್ 21: ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು. ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ನ್ಯಾಯಾಧೀಶರ ಎದುರು ಮುನಿರತ್ ಅಳಲು:


ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡರು. ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ.


ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಮುನಿರತ್ನ ಅಲವತ್ತುಕೊಂಡರು.





ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಎಲ್ಲಿ ಕೊಡಬೇಕೋ ಅಲ್ಲಿಯೇ ರಾಜೀನಾಮೆ ಕೊಡಿ ಎಂದರು. ನಂತರ, ಪೊಲೀಸ್ ಕಸ್ಟಡಿಗೆ ಕೇಳುತ್ತೀರಾ ಎಂದು ಪೊಲೀಸರನ್ನು ಪ್ರಶ್ನಿಸಿದರು. ಇದೇ ವೇಳೆ, ‘ಇಲ್ಲ’ ಎಂದು ಪಿಪಿ ಉತ್ತರ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್