LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾದರಿ ನೀತಿ ಸಂಹಿತೆ ಉಲ್ಲಂಘನೆ:189 ಪ್ರಕರಣ ದಾಖಲು

ಬೆಂಗಳೂರು, ಏಪ್ರಿಲ್​ 26: ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದೆ.ದಾಖಲಾಗಿವೆ

ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನಾವಣಾ ಆಯೋಗ 46.11 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಜಿಲ್ಲಾ ಚುನಾವಣಾ ಕಚೇರಿಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 25 ರವರೆಗೆ ಒಟ್ಟು 6,552 ಎಫ್‌ಐಆರ್‌ಗಳು ದಾಖಲಾಗಿವೆ.

ಲೆಕ್ಕಕ್ಕೆ ಸಿಗದ 11.83 ಕೋಟಿ ನಗದು ಹಾಗೂ 19.2 ಕೋಟಿ ಮೌಲ್ಯದ ಮದ್ಯವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯು ಚುನಾವಣಾಧಿಕಾರಿಗಳೊಂದಿಗೆ ಸೇರಿ 4,67,629.634 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದೆ. 7.17 ಕೋಟಿ ಮೌಲ್ಯದ ಒಟ್ಟು 227.47 ಕೆಜಿ ಮಾದಕ ವಸ್ತುಗಳು ಮತ್ತು 53.71 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸೇರಿದಂತೆ 49.58 ಕೆಜಿ ಬೆಲೆಬಾಳುವ ಲೋಹಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

1.23 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 6.14 ಕೋಟಿ ಮೌಲ್ಯದ ಹಲವು ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ವಾಹನಗಳನ್ನು ನಗದು, ಚಿನ್ನ, ಮದ್ಯ, ಬಿಟ್ಟಿ ವಸ್ತುಗಳನ್ನು ಸಾಗಿಸಲು ವಾಹನಗಳನ್ನು ಬಳಸಲಾಗುತ್ತಿತ್ತು. ಪೊಲೀಸರು 129 ಎಫ್‌ಐಆರ್‌ಗಳನ್ನು ದಾಖಲಿಸಿದ್ದರೆ, ಅಬಕಾರಿ ಇಲಾಖೆ 6,423 ಪ್ರಕರಣಗಳನ್ನು ದಾಖಲಿಸಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್