LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬ್ರಿಲಿಯಂಟ್ ಸಿಬಿಎಸ್‌ಇ ಶಾಲೆಯು 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

ಸಂಕೇಶ್ವರ : ಇಲ್ಲಿಯ ಬ್ರಿಲಿಯಂಟ್ ಸಿಬಿಎಸ್‌ಇ ಶಾಲೆಯು ಮಂಗಳವಾರ ಪ್ರಕಟವಾದ ಸಿಬಿಎಸ್‌ಇ ೧೦ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶದಲ್ಲಿ ಶೇ.೧೦೦ ರಷ್ಟು ಫಲಿತಾಂಶ ಗಳಿಸಿ ತನ್ನ ಶೈಕ್ಷಣಿಕ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಶಾಲೆಯ ಪ್ರಾಚಾರ್ಯೆ ನಸೀಮಾ ಢಾಂಗೆ ಹೇಳಿದರು.


ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿರುವುದು ಶಾಲೆಯ ಉನ್ನತ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಶಾಲೆಗೆ ಮಂಜುಕುಮಾರಿ ಚೌದರಿ ಪ್ರಥಮ, ಸಯ್ಯದ ಗಜೇಂದ್ರಗಡ ದ್ವಿತೀಯ, ಆದರ್ಶ ಪಾಟೀಲ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ ಒಟ್ಟಾರೆ ಶೇ.೧೦೦ ಫಲಿತಾಂಶವು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದಿAದ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.


ಬ್ರಿಲಿಯಂಟ್ ಸ್ಕೂಲ್ ಶೈಕ್ಷಣಿಕ ಮೌಲ್ಯಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿದ್ದು ಅಧ್ಯಕ್ಷ ಪವನ ಕಣಗಲಿ ಅವರ ಮಾರ್ಗದರ್ಶನದಲ್ಲಿ ಅತ್ಯುತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಲಾಗಿದೆ. “ಲಾಸ್ಟ್ ಬೆಂಚ್ ಟು ಫಸ್ಟ್ ಬೆಂಚ್” ಪರಿಕಲ್ಪನೆಯೊಂದಿಗೆ ಪ್ರಸ್ತಕ ಶೈಕ್ಷಣಿಕ ಈ ವರ್ಷದಿಂದ ಕಲಿಕೆಯಲ್ಲಿ ಕುಂಟಿತ ವಿದ್ಯಾರ್ಥಿಗಳ ಕಿಲಿಕಾ ಸಾಮರ್ಥ್ಯ ವೃದ್ಧಿಸಲು ವಿಶೇಷ ತರಬೇತಿಯನ್ನು ಒದಗಿಸಲು ಬ್ರಿಲಿಯಂಟ್ ಸ್ಕೂಲ್ ಮುಂದಾಗಿದೆ. ಇದರ ಲಾಭವನ್ನು ಸ್ಥಳೀಯ ವಿದ್ಯಾರ್ಥಿಗಳು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್