LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮೂವರ ಬಂಧನ

ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆದಿದೆ. ಗುದದ್ವಾರದಲ್ಲಿ ಚಿನ್ನ ಅಡಗಿಸಿ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಮೂವರ ಬಂಧನ ಮಾಡಲಾಗಿದೆ. ಶ್ರೀಲಂಕಾದ ಕೊಲೊಂಬೊದಿಂದ 6E 1168 ವಿಮಾನದಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿದ್ದ ಪ್ರಯಾಣಿಕರ ತಪಾಸಣೆ ಮಾಡುವಾಗ ಸಿಕ್ಕಿ ಬಿದ್ದಿದ್ದಾರೆ.

ತಪಾಸಣೆ ವೇಳೆ ಮೂವರು ಆರೋಪಿಗಳು ಪೆಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಚಿನ್ನ ಅಡಗಿಸಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಪೆಸ್ಟ್ ರೂಪದಲ್ಲಿ ಇಟ್ಟುಕೊಂಡು ಬಂದಿದ್ದ 1 ಕೋಟಿ 19 ಲಕ್ಷದ 38 ಸಾವಿರ ಮೌಲ್ಯದ 1,670 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಂದ ತೀವ್ರ ವಿಚಾರಣೆ ನಡೆಯುತ್ತಿದೆ.

ಈ ಹಿಂದೆ ಮನುಷ್ಯರ ದೇಹದಿಂದ ಸೂಜಿ, ಪಿನ್ನು, ಕಬ್ಬಿಣದ ತುಂಡುಗಳು, ಮುಂತಾದ ಚಿಕ್ಕ ಚಿಕ್ಕ ವಸ್ತುಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ದೇಹದಿಂದ ಹೊರಗೆ ತೆಗೆದ ಅನೇಕ ಘಟನೆಗಳು ನಡೆದಿತ್ತು. ಇಂತಹ ಚಿಕ್ಕ ವಸ್ತುಗಳನ್ನು ದೇಹದಿಂದ ಹೊರತೆಗೆಯುವುದು ವೈದ್ಯರಿಗೆ ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ವ್ಯಕ್ತಿಯ ದೇಹದಲ್ಲಿರುವ ವಸ್ತುವನ್ನು ಕಂಡು ವೈದ್ಯರಿಗೆ ಆಘಾತವನ್ನುಂಟಾಗಿದೆ. ಮಧ್ಯಪ್ರದೇಶದ ವ್ಯಕ್ತಿಯೊಬ್ಬನ ಗುದದ್ವಾರದಿಂದ ಸೋರೆಕಾಯಿ ಅನ್ನು ವೈದ್ಯರು ತೆಗೆದುಹಾಕಿದ್ದು, ಇದು ಅಚ್ಚರಿಗೆ ಕಾರಣವಾಗಿದೆ. ಈ ಸುದ್ದಿ ಈಗ ಹೆಚ್ಚು ವೈರಲ್‌ (Viral News) ಆಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್