LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವೈದ್ಯನ ಮನೆಯಲ್ಲಿ 360 ಕೆ.ಜಿ ಅಮೋನಿಯಂ ನೈಟ್ರೇಟ್​, ಶಸ್ತ್ರಾಸ್ತ್ರ!

ಫರಿದಾಬಾದ್(ನವದೆಹಲಿ): ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ದೆಹಲಿಯ ಫರಿದಾಬಾದ್​ನ ಮನೆಯೊಂದರಲ್ಲಿ ಅಪಾರ ಪ್ರಮಾಣದ ದಹನಕಾರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳು ಅಮೋನಿಯಂ ನೈಟ್ರೇಟ್​ ಮತ್ತು ​ಅಸಾಲ್ಟ್ ರೈಫಲ್ ಮತ್ತು ಮದ್ದುಗುಂಡುಗಳಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಬಂಧನಕ್ಕೊಳಗಾಗಿದ್ದ ವೈದ್ಯ ನೀಡಿದ ಮಾಹಿತಿ ಮೇರೆಗೆ ಈ ದಾಳಿ ದಾಳಿ ನಡೆದಿದೆ.


ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಫರಿದಾಬಾದ್​ ಪೊಲೀಸ್​ ಆಯುಕ್ತರು, ಫರಿದಾಬಾದ್‌ನ ಧೌಜ್ ಪ್ರದೇಶದ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಬೋಧನೆ ಮಾಡುತ್ತಿದ್ದ ಡಾ.ಮುಜಮ್ಮಿಲ್​ನನ್ನು ಕೆಲವು ದಿನಗಳ ಹಿಂದೆ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದಾದ ಬಳಿಕ ಭಾನುವಾರ ಇಲ್ಲಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಕಳೆದ ಕೆಲವು ದಿನಗಳಿಂದ ಫರಿದಾಬಾದ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಮುಜಮ್ಮಿಲ್​ನನ್ನು ನಮ್ಮ ತಂಡ ಬಂಧಿಸಿದೆ. ನಿನ್ನೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮನೆಯೊಂದರಲ್ಲಿ 360 ಕೆಜಿ ದಹನಕಾರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅದು ಬಹುಶಃ ಅಮೋನಿಯಂ ನೈಟ್ರೇಟ್ ಆಗಿರಬಹುದು. ಆದರೆ, ಆರ್‌ಡಿಎಕ್ಸ್ ಅಲ್ಲ ಎಂದು ಸ್ಪಷ್ಟವಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್