LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಅಭಿರುಚಿಗೆ ತಕ್ಕಂತೆ ಶಿಕ್ಷಣ ಕೊಡಿಸಿದಲ್ಲಿ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ"

ಇಂಡಿ: ಪ್ರತಿಯೋಬ್ಬ ಪಾಲಕರು ತಮ್ಮ ಮಕ್ಕಳ ಮೇಲೆ ಒತ್ತಡ ಹೇರದೆ ಕಲಿಕೆಗೆ ಅನುಗುಣವಾಗಿ ಅವರ ಅಭಿರುಚಿಗೆ ತಕ್ಕಂತೆ ಶಿಕ್ಷಣ ಕೊಡಿಸಿದಲ್ಲಿ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಅವರು ಶನಿವಾರರಂದು ನಗರದ ಸರಕಾರಿ ಪ್ರಥಮ ದರ್ಜೆ(ಡಿಗ್ರಿ) ಕಾಲೇಜಿನಲ್ಲಿ ಶ್ರೀ ಯಶವಂತರಾಯಗೌಡ.ವಿ.ಪಾಟೀಲ ಫೌಂಡೆಶನ್(ರಿ) ಪಡನೂರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ ೨೦೨೫-೨೬ನೇ ಸಾಲೀನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಒಂದು ದೀನದ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಪರಿಕ್ಷೇ ಎದುರಿಸಿ ಯಾವುದೆ ಅಂಜಿಕೆ ಆತಂಕಕ್ಕೆ ಒಳಗಾಗದೆ ಚಿಸರಳವಾಗಿ ಪರಿಕ್ಷೇ ಬರೆಯಲು ಮುಂದಾದಲ್ಲಿ ಆತ್ಮ ವಿಶ್ವಾಸ ಹೇಚ್ಚಾಗುತ್ತದೆ. ಯಾವುದೆ ಮೇಲ್ ಪ್ರ್ಯಾಕಟ್ಟಿಸ್ ಮಾಡಲು ಮುಂದಾಗಬೇಡಿ ಇದು ಒಳ್ಳೆಯ ಪ್ರವರ್ತಿಯಲ್ಲ ಇದರಿಂದ ನಿಮ್ಮ ಭಾವಿ ಜೀವನದ ಮೇಲೆ ದುಷ್ಪರಿಣಾಮ ಬಿರುತ್ತದೆ. ಮಹಾತ್ಮಾಗಾಂಧಿಜಿಯವರ ಹಾಗೂ ನೇಲ್ಸ್‌ನ ಮೇಂಡೆಲ ಅವರ ಆದರ್ಶಗಳನ್ನು ನಿಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಸ್ಟೂಡೆಂಟ್ ಲೈಫ್ ಇಸ್ ಗೊಲ್ಡನ್ ಲೈಫ್ ಎನ್ನುವ ಹಾಗೆ ಇಂತಹ ಕಾಲ ಮತ್ತೆ ಮರಳಿ ಸಿಗುವುದಿಲ್ಲ ಇದರ ಸದುಪಯೋಗಡಿಸಿಕೊಂಡು ಮುಂದಿನ ಭಾವಿ ಜೀವನ ರೂಪಿಕೊಳ್ಳಬೇಕು. ತಂದೆ ತಾಯಿಗಳ ಉಪಕಾರ ಸ್ಮರಣೆಯನ್ನು ತಮ್ಮ ಜೀವನುದ್ದಕ್ಕೂ ಮಾಡಿದರು ಸಾಲದು. ಅದರ ಜೊತೆಯಲ್ಲಿ ನಿವೂ ಕಲಿತ ಶಾಲೆ ನಿಮ್ಮನ್ನು ಕಲಿಸಿರತಕ್ಕಂತಹ ಗುರುಗಳನ್ನು ಸ್ಮರಿಸುವ ಕಾರ್ಯ ಮಾಡಬೇಕು ಎಂದರು.
ಲ ಫೌಂಡೆಶನ್‌ದ ಗೌರವ ಅಧ್ಯಕ್ಷೆ ಶ್ರೀಮತಿ ಶಿವಲೀಲಾ ಆಶೀಶ್ ವಿರಾಪೂರ, ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೀರಯ್ಯ ಸಾಲೀಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಎಸ್.ಎ.ಮುಜಾವರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡುಗಡ್ಡಿ, ಶಿಕ್ಷಕ ರಾಘವೇಂದ್ರ ಕುಲಕರ್ಣಿ ಮಾತನಾಡಿದರು.
ಈ ಸಂದರ್ಭದಲ್ಲಿ ೨೦೨೫-೨೬ನೇ ಸಾಲೀನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಎಲ್.ಬಿ. ಹಾಗೂ ನೀಲ ನಕ್ಷೇ ಆಧಾರಿತ ಉತಿರ್ಣತಾ ಕೈಪಿಡಿ ಯಶೋಗಾಥೆ ಪುಸ್ತಕವನ್ನು ಬಿಡುಗಡೆ ಮಾಡಿದರು.
ವೇದಿಕೆ ಮೇಲೆ ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸಿಲ್ದಾರ ಬಿ.ಎಸ್.ಕಡಕಬಾವಿ, ತಾಪಂ ಇಓ ಡಾ| ಭೀಮಾಶಂಕರ ಕನ್ನೂರ ಇದ್ದರು. ಫೌಂಡೇಶನ ಪಧಾಧಿಕಾರಿಗಳು ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ ಮುಖ್ಯೋಪಾಧ್ಯಾಯರು, ಶಿಕ್ಷಕರು ವಿದ್ಯಾರ್ಥಿ/ನೀಯರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್