LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಯಬಾಗ ಪಾಲಿಟೆಕ್ನಿಕ್ ಕಾಲೇಜನಲ್ಲಿ ಕ್ಯಾಂಪಾಸ್ ಸಂದರ್ಶನ

ರಾಯಬಾಗ: ಕಾಲೇಜ್ ಕ್ಯಾಂಪಾಸ್‌ಗಳಲ್ಲಿ ನಡೆಯುವ ಸಂದರ್ಶನಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶ ಎಂದು ರೇಣುಕಾ ಶುಗರ್‍ಸ್ ಜನರಲ್ ಮ್ಯಾನೇಜರ್ ಸಂಗಮನಾಥ ಜಾಮದಾರ ಹೇಳಿದರು.

ಶನಿವಾರ ರಾಯಬಾಗ ಪಾಲಿಟೆಕ್ನಿಕ್ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಕ್ಯಾಂಪಾಸ್ ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಂತ್ರಿಕ ಶಿಕ್ಷಣ ಪಡೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಥಳೀಯ ಕಂಪನಿಗಳಲ್ಲಿ ಉದ್ಯೋಗ ಪಡೆದರೆ ತಮ್ಮ ಪಾಲಕರನ್ನು ಚೆನ್ನಾಗಿ ನೋಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಫುಕೊಕು ಕಂಪನಿ ಬೆಳಗಾವಿ ಘಟಕದ ಎಚ್.ಆರ್ ಸಿದ್ದಪ್ಪ ರೆಂಟೆ ಮಾತನಾಡಿ, ನಮ್ಮ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ಘಟಕಗಳನ್ನು ಹೊಂದಿದೆ. ಸ್ಥಳೀಯವಾಗಿ ಬೆಳಗಾವಿಯಲ್ಲಿ ಘಟಕ ಇದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಪಡೆಯಲು ಸಾಧ್ಯವಾಗಿದೆ. ಕಂಪನಿ ಒಳ್ಳೆಯ ವೇತನದ ಜೊತೆಗೆ ಎಲ್ಲ ಸೌಲಭ್ಯಗಳು ನೀಡುತ್ತಿದೆ ಎಂದರು.

ಪ್ರಾಚಾರ್ಯ ಬಿ.ಎಸ್.ದಡ್ಡಿ, ಸಂಜಯ ಕೀಲ್ಲೆದಾರ, ಅಲ್ಲಪ್ಪ ತಳವಾರ, ಮೇರಿ, ಅರುಣ ಪೋಳ, ಎಮ್.ಆರ್.ಜೇಡರ, ರಾಜನ ಅನ್ವೇಕರ, ಸಿ.ಕೆ.ಒಡೆಯರ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್