LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಹೆಚ್ಚೆಚ್ಚು ಗ್ರಂಥಾಲಯಗಳು ತೆರೆಯುವ ಮೂಲಕ ಅಂಬೇಡ್ಕರರ ತತ್ವಗಳನ್ನು ಬಿತ್ತಬೇಕಾಗಿದೆ"

ಸಿಂದಗಿ: ಸಂವಿದಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಜಯಂತಿಯನ್ನು ಪಕ್ಷಾತೀತವಾಗಿ ಎಲ್ಲರೂ ಆಚರಣೆ ಮಾಡಿದ್ದು ಸ್ವಾಗತಾರ್ಹ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬಸ್ ಡಿಪೋದಲ್ಲಿ ಎಸ್‌ಸಿ/ಎಸ್‌ಟಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅವರ ಚಿಂತನೆಗಳು ಮುಂದಿನ ಯುವ ಪಿಳಿಗೆಗೆ ರವಾನೆ ಆಗಬೇಕಾದರೆ ಹೆಚ್ಚೆಚ್ಚು ಗ್ರಂಥಾಲಯಗಳು ತೆರೆಯುವ ಮೂಲಕ ಅವರ ತತ್ವಗಳನ್ನು ಬಿತ್ತಬೇಕಾಗಿದೆ. ಇವರ ಜಯಂತಿಯನ್ನು ಆಚರಣೆ ಮಾಡುವುದರ ಜೊತೆಗೆ ತತ್ವದಾರ್ಶಗಳನ್ನು ಮೈಗೂಡಿಸಿಕೊಂಡು ಬದುಕು ಸಾಗಿಸಬೇಕು ಎಂದರು.
ಈ ವೇಳೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೈ.ಸಿ.ಮಯೂರ ಮಾತನಾಡಿ, ಶೋಷಿತ ಸಮುದಾಯದಲ್ಲಿ ಜನಿಸಿ, ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ದ ಬಹುದೊಡ್ಡ ಕ್ರಾಂತಿಕಾರಿ ಚಳುವಳಿ ಆರಂಭಿಸಿದ್ದಲ್ಲದೇ ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಲು ಹಗಲು ರಾತ್ರಿ ಶ್ರಮಿಸಿ ಮನುಕುಲ ಒಂದೇ ಎಂಬ ಆಶಯದೊಂದಿಗೆ ವಿಶ್ವದ ಅತಿದೊಡ್ಡ ಸಂವಿಧಾನ ರಚನೆ ಮಾಡುವ ಮೂಲಕ ಸರ್ವ ಜನರ ಒಳಿತಿಗಾಗಿ ಜನಿಸಿದ ಮಹಾನ್ ಚೇತನ್ ಡಾ.ಬಾಬಾಸಾಹೇಬ ಅಂಬೇಡ್ಕರ ಎಂದರು.
ವೇದಿಕೆಯ ಮೇಲೆ ಘಟಕ ವ್ಯವಸ್ಥಾಪಕ ಎಂ.ಆರ್.ಲಮಾಣಿ, ವಲಯ ಅರಣ್ಯಾಧಿಕಾರಿ ಇರ್ಶಾದ ನೇವಾರ, ಗೋಲಗೇರಿ ಗೋಲ್ಲಾಳೇಶ್ವರ ದೇವಸ್ಥಾನದ ಧರ್ಮದರ್ಶಿ ರವಿರಾಜ ದೇವರಮನಿ, ರುದ್ರಗೌಡ ಪಾಟೀಲ ಯಂಕಂಚಿ, ಲೆಕ್ಕಪತ್ರ ಮೇಲ್ವಿಚಾರಕ ಸಂತೋಷ ಹತ್ತರಕಿ, ಸಿಬ್ಬಂದಿ ಮೇಲ್ವಿಚಾರಕ ಆನಂದ ಬಡಿಗೇರ ಇದ್ದರು.
ಇದೇ ಸಂದರ್ಭದಲ್ಲಿ ಶ್ರೀಧರ ಇಂಗಳೆ, ಮುತ್ತಪ್ಪ ತಳ್ಳೋಳ್ಳಿ, ಬಸವರಾಜ ದ್ಯಾಮಗೊಂಡ, ಶಿವಶರಣ ಹೊಸಮನಿ, ಪರಸುರಾಮ ದೊಡಮನಿ, ಬಾಬು ಬೀಳಗಿ, ರಾಜಶೇಖರ ಕೊಣ್ಣೂರ, ಜೈಬೀಮ ಪೂಜಾರಿ, ಮರಳಪ್ಪ ಕುದರಗೊಂಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಸುರೇಶ ಹೊಸಮನಿ ಸ್ವಾಗತಿಸಿದರು. ಶ್ರೀಕಾಂತ ಮೆಟಗಾರ ನಿರೂಪಿಸಿದರು. ಕಾರ್ಯದರ್ಶಿ ರಾಘವೇಂದ್ರ ಜಾಬನವರ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್