LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

೪೬ ಪ್ರಕರಣಗಳು ಇತ್ಯರ್ಥ, ಒಂದು ಪ್ರಕರಣದಲ್ಲಿ ರಾಜೀ : ಬಿ.ವೀರಪ್ಪ 

ಬಾಗಲಕೋಟೆ, ಜುಲೈ ೨೫ : ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸಕೈಗೊಂಡ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಬಾಕಿ ಇದ್ದ ಬಾಗಲಕೋಟೆ ಜಿಲ್ಲೆಯ ೧೩೫ ಪ್ರಕರಣಗಳ ವಿಚಾರಣೆ ನಡೆಸಿ, ಅದರಲ್ಲಿ ೪೬ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ, ಒಂದು ಪ್ರಕರಣವನ್ನು ಉಭಯ ಪಕ್ಷಗಳ ರಾಜಿ ಮೂಲಕ ಇತ್ಯರ್ಥಪಡಿಸಲಾಯಿತು.
ವಿಚಾರಣೆ ವೇಳೆ ವಿವಿಧ ಇಲಖೆಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿ, ಸಂಬಂದಪಟ್ಟ ಅಧಿಕಾರಿಗಳಿಂದ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಪ್ರಕರಣಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಟ್ಟು ೧೩೫ ಪ್ರಕರಣಗಳ ಪೈಕಿ ೪೭ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಉಳಿದ ಪ್ರಕರಣಗಳಲ್ಲಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಸ್ಪಂದನೆ ನೀಡುವುದು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನವನ್ನು ಖಚಿತಪಡಿಸುವುದು ಲೋಕಾಯುಕ್ತ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಿ, ಅನಗತ್ಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಉಪ ಲೋಕಾಯುಕ್ತರು ಸೂಚಿಸಿದರು. 
ವಿಚಾರಣೆ ವೇಳೆಯಲ್ಲಿ ಉಪ ಲೋಕಾಯುಕ್ತರ ಪರ್ಸನಲ್ ಸೆಕ್ಟೇಟರಿ ಅರವಿಂದ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ,  ಲೋಕಾಯುಕ್ತ ಇಲಾಖೆಯ ಎಸ್‌ಪಿ ನಂದಗಾವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಲೋಕಾಯುಕ್ತ ಇಲಾಖೆಯ ಡಿವಾಯ್‌ಎಸ್‌ಪಿ ಸುರೇಶ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್