LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಯುಜಿಸಿಇಟಿ ಅರ್ಜಿ ತಪ್ಪು ತಿದ್ದುಪಡಿಗೆ ಜುಲೈ 4ರಿಂದ 6ರವರೆಗೆ ಅವಕಾಶ



ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತನ್ನ ಪೋರ್ಟಲ್​​ನಲ್ಲಿ ಯುಜಿಸಿಇಟಿ-2024ರ ಅಭ್ಯರ್ಥಿಗಳ ಮಾಹಿತಿಯನ್ನು ಜೂನ್ 29ರಂದು ಪ್ರಕಟಿಸಿದೆ. ಇದರಲ್ಲಿ ಯಾವುದೇ ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4ರಿಂದ 6ರ ಒಳಗೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ.


ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿಇಟಿ ಅರ್ಜಿಯಲ್ಲಿ ತಪ್ಪೆಸಗಿದ್ದರಿಂದ ವ್ಯತ್ಯಾಸಗಳಾಗಿದೆ. ಇದನ್ನು ಗಣನೆಗೆ ತೆಗೆದುಕೊಂಡು ಅಂತಿಮ ಆವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಒಂದು ಲಕ್ಷಕ್ಕಿಂತ ಒಳಗೆ ರ‍್ಯಾಂಕ್ ಹೊಂದಿರುವವರು ಜುಲೈ 4ರಂದು, 1.8 ಲಕ್ಷಕ್ಕಿಂತ ಒಳಗಿನ ರ‍್ಯಾಂಕ್‌ನವರು ಜುಲೈ 5ರಂದು ಹಾಗೂ 1.8 ಲಕ್ಷಕ್ಕಿಂತ ಮೇಲ್ಪಟ್ಟು ರ‍್ಯಾಂಕ್ ಹೊಂದಿರುವವರು ಜುಲೈ 6ರಂದು ವೆಬ್​ಸೈಟ್‌ನಲ್ಲಿ ಪ್ರಕಟಿಸಿರುವ ವೇಳಾಪಟ್ಟಿಯಂತೆ ಹಾಜರಾಗಬೇಕಿದೆ.





ಆನ್‌ಲೈನ್ ಪೋರ್ಟಲ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಲ್ಲಿ ವ್ಯತ್ಯಾಸ ಗುರುತಿಸಿರುವ ಅಭ್ಯರ್ಥಿಗಳು ಯುಜಿಸಿಇಟಿ-2024ಕ್ಕೆ ಸಲ್ಲಿಸಿದ್ದ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬರಬೇಕೆಂದು ಅವರು ತಿಳಿಸಿದ್ದಾರೆ.


ಎಲ್ಲಾ ಮಾಹಿತಿ ಸರಿ ಇರುವವರು ಕೆಇಎಗೆ ಬರುವ ಅಗತ್ಯವಿಲ್ಲ. ಇಂತಹ ಅಭ್ಯರ್ಥಿಗಳು ಕಚೇರಿಗೆ ಬಂದು ಸಮಯ ಹಾಗೂ ಶ್ರಮ ವ್ಯರ್ಥ ಮಾಡಿಕೊಳ್ಳಬಾರದು. ಅಂಥವರಿಗೆ ವೆರಿಫಿಕೇಶನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಕೆಇಎ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.


ಅಭ್ಯರ್ಥಿಗಳು ಅರ್ಜಿಯಲ್ಲಿ ಸಲ್ಲಿಸಿದ್ದ ವಿವರಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ವೆಬ್‌ಸರ್ವಿಸ್ ಮೂಲಕ ಪಡೆದ ಮಾಹಿತಿಯನ್ನು ಪೋರ್ಟಲ್​ನಲ್ಲಿ ಪ್ರಕಟಿಸಿ ಪರಿಶೀಲಿಸಿಕೊಳ್ಳಲು ಜೂನ್ 29ರಿಂದ ಅವಕಾಶ ನೀಡಲಾಗಿತ್ತು.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ