LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಕೆ; ಡಿಕೆ ಶಿವಕುಮಾರ್ ಡಿನ್ನರ್‌ ಪಾರ್ಟಿ ಆಯೋಜನೆ; ಶಾಸಕರ ವಿಶ್ವಾಸ ಗಳಿಸಲು ತಂತ್ರಗಾರಿಕೆ

ಬೆಂಗಳೂರು, ಮಾರ್ಚ್ 13: ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakuamr) ಮಧ್ಯೆ ಕಳೆದ ಕೆಲವು ದಿನಗಳಿಂದಲೂ ಮುಸುಕಿನ ಗುದ್ದಾಟ ನಡೆಯುತ್ತಿದೆ. ಬಜೆಟ್ ವೇಳೆಗೆ ಎಲ್ಲವೂ ತುಸು ತಣ್ಣಗಾಗಿದ್ದರೂ, ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸದನದಲ್ಲೇ ಸಿದ್ದರಾಮಯ್ಯ ಹೇಳಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಇದೇ ಹೊತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಶಾಸಕರಿಗೆ ಔತಣಕೂಟ ಆಯೋಜನೆ ಮಾಡಲು ಮುಂದಾಗಿದ್ದಾರೆ. ಬೆಂಗಳೂರು ನಗರದ ಖಾಸಗಿ ಹೊಟೇಲ್​ನಲ್ಲಿ ಎಲ್ಲಾ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡುವೆಯೂ ಡಿಕೆ ಶಿವಕುಮಾರ್ ಔತಣಕೂಟ ಸಾಹಸಕ್ಕೆ ಕೈಹಾಕಿದ್ದು ಭಾರಿ ಮಹತ್ವ ಪಡೆದಿದೆ.

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ್ದನ್ನೇ ನೆಪವಾಗಿಟ್ಟುಕೊಂಡು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಅವರು ಮಾರ್ಚ್ 11 ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ್ದಾರೆ. ಇಷ್ಟೇ ಅಲ್ಲದೆ, ಪ್ರತಿ ಅಧಿವೇಶನ ಸಂದರ್ಭದಲ್ಲಿಯೂ ಡಿಕೆ ಶಿವಕುಮಾರ್ ಶಾಸಕರಿಗೆ ಡಿನ್ನರ್ ಆಯೋಜನೆ ಮಾಡುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ