LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಬಿವಿಪಿಯ ೭೮ನೇ ಸ್ಥಾಪನಾ ದಿನಾಚರಣೆ 

ಬಳ್ಳಾರಿ,ಜು.10: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಯ ೭೮ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ಬಳ್ಳಾರಿ ಎಬಿವಿಪಿ ಕಾರ್ಯಾಲಯದ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ವಿಜೃಂಭಣೆಯಿAದ ನೆರವೇರಿಸಲಾಯಿತು.
ಕಾರ್ಯಕ್ರಮಕ್ಕೆ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಬಿವಿಪಿಯ ರಾಷ್ಟ್ರ ನಿರ್ಮಾಣದ ಸಂಕಲ್ಪ, ವಿದ್ಯಾರ್ಥಿ ಹಿತದ ಕಾರ್ಯಗಳು ಹಾಗೂ ಯುವಜನರಲ್ಲಿ ದೇಶಭಕ್ತಿಯ ಮನೋಭಾವ ಬೆಳೆಸುವಲ್ಲಿ ಎಬಿವಿಪಿಯ ಪಾತ್ರವನ್ನು ಅವರು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಎಬಿವಿಪಿಯ ಕೇಂದ್ರೀಯ ಕಾರ್ಯಸಮಿತಿ ಸದಸ್ಯರು ಹಾಗೂ ಬಳ್ಳಾರಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸಚಿನ್ ಕುಳಗೇರಿ, ಜಿಲ್ಲಾ ಪ್ರಮುಖರಾದ ಡಾ. ರಾಮಕಿರಣ, ಶ್ರೀ ನಾಗರಾಜ ಬಟಗೇರಾ, ಶ್ರೀ ಟಿ. ಭರತ, ವಿಭಾಗ ಸಂಚಾಲಕರಾದ ಕೆ. ದಿಲೀಪ್ ಕುಮಾರ್, ನಗರ ಅಧ್ಯಕ್ಷರಾದ ಡಾ. ಮಂಗಳಾ ಬಿ.ಎನ್., ನಗರ ಕಾರ್ಯದರ್ಶಿಯಾದ ಶ್ರೀ ಬಸವಕಿರಣಗೌಡ, ವಿ.ಎಸ್.ಎಸ್. ಟ್ರಸ್ಟ್ ಪ್ರಮುಖರು, ಹಿರಿಯ ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಬಿವಿಪಿಯ ೭೮ ವರ್ಷಗಳ ಸೇವಾ ಪಯಣವನ್ನು ಸ್ಮರಿಸಿ, ವಿದ್ಯಾರ್ಥಿ ಸಮುದಾಯದ ಸಮಗ್ರ ಅಭಿವೃದ್ಧಿ ಹಾಗೂ ರಾಷ್ಟ್ರ ಪುನರ್‌ನಿರ್ಮಾಣಕ್ಕಾಗಿ ಸಂಘಟನೆಯು ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್