LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ರಾವಿಹಾಳ್‌ನಲ್ಲಿ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ  ಅಧಿಕೃತ ಆಹ್ವಾನ

ಸಿರುಗುಪ್ಪ :  29:.ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೆ.9ರಂದು ತಾಲ್ಲೂಕಿನ ರಾವಿಹಾಳ್ ಗ್ರಾಮದಲ್ಲಿ ನಡೆಯಲಿರುವ 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ನಿವೃತ್ತ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಜೆ. ನರಸಿಂಹಮೂರ್ತಿ ಅವರು ಆಯ್ಕೆಯಾಗಿದ್ದು, ಕಸಾಪ ಪದಾಧಿಕಾರಿಗಳು ಅವರಿಗೆ ಅಧಿಕೃತವಾಗಿ ಶುಕ್ರವಾರ ಆಹ್ವಾನ ನೀಡಿದ್ದರು.
ಕನ್ನಡ ಸಾಹಿತ್ಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಜೆ. ನರಸಿಂಹಮೂರ್ತಿ ಅವರು ನೀಡಿದ ಗಣನೀಯ ಕೊಡುಗೆ, ಸಾಹಿತ್ಯಾಸಕ್ತಿ ಹಾಗೂ ಕನ್ನಡ ಪ್ರೇಮವನ್ನು ಗುರುತಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. 
ಪರಿಷತ್ತಿನ ಪದಾಧಿಕಾರಿಗಳು ನರಸಿಂಹಮೂರ್ತಿ ಅವರ ನಿವಾಸದಲ್ಲಿ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳುವಂತೆ ಮನವಿ ಮಾಡಿ, ಅಧಿಕೃತವಾಗಿ ಆಹ್ವಾನಿಸಿದರು.
 ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು ಮಾತನಾಡಿ "ನರಸಿಂಹಮೂರ್ತಿಯವರಂತಹ ಹಿರಿಯ ಸಾಹಿತಿ ಹಾಗೂ ಅನುಭವಿ ಶಿಕ್ಷಕರು ಈ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನದಿಂದ ಸಮ್ಮೇಳನವು ಮತ್ತಷ್ಟು ಅರ್ಥಪೂರ್ಣವಾಗಿ ಮೂಡಿಬರಲಿದೆ. ವಿಶೇಷವಾಗಿ ಗಡಿಭಾಗವಾದ ರಾವಿಹಾಳ್‌ನಲ್ಲಿ ಈ ಸಾಹಿತ್ಯ ಹಬ್ಬ ನಡೆಯುತ್ತಿದ್ದು, ಅವರ ಅಧ್ಯಕ್ಷತೆಯು ಗ್ರಾಮೀಣ ಭಾಗದ ಸಾಹಿತ್ಯಾಸಕ್ತರಿಗೆ ಹಾಗೂ ಕನ್ನಡಿಗರಿಗೆ ದೊಡ್ಡ ಪ್ರೇರಣೆಯಾಗಲಿದೆ" ಎಂದು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಮತ್ತು ಮುಖಂಡರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ