LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಥಣಿ ತಾಲ್ಲೂಕಿನ ರೈತನ ಮಗ ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ

ಬೆಳಗಾವಿ, 

ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದಲ್ಲಿ ರೈತನ ಮಗನಾದ ಬಸವರಾಜ್ ಧರೇಪ್ಪ ಕೆಂಪವಾಡ UPSC ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದು, ಇಡೀ ರಾಜ್ಯಕ್ಕೆ, ವಿಶೇಕ್ಷವಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಶುಕ್ರವಾರ ಪ್ರಕಟವಾದ ಫಲಿತಾಂಶದಲ್ಲಿ ಬಸವರಾಜ್ ಈ ಮಹೋನ್ನತ ಸಾಧನೆ ಮಾಡಿದ್ದಾರೆ. ಒಬ್ಬ ಸಾಮಾನ್ಯ ರೈತನ ಮಗನಾಗಿ, ಗ್ರಾಮೀಣ ಹಿನ್ನೆಲೆಯಿಂದ ಬಂದು ಈ ಸಾಧನೆ ಮಾಡಿರುವುದು ಇಂದು ಸಾವಿರಾರು ಯುವಕರಿಗೆ ಸ್ಫೂರ್ತಿಯಾಗಿದೆ. ಮಗನ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಇಡೀ ಸವದಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಗ್ರಾಮಸ್ಥರು ಹಾಗೂ ಸಂಬಂಧಿಕರು ಬಸವರಾಜ್ ಅವರ ಮನೆಗೆ ಧಾವಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಪರಿಶ್ರಮದ ಹಾದಿ

ಬಸವರಾಜ್ ತನ್ನ ಪ್ರಾಥಮಿಕ ಶಿಕ್ಷಣ ಸವದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೂರೈಸಿದ್ದು, ಬಳಿಕ ಅಥಣಿಯಲ್ಲಿ ಮುಂದಿನ ವಿದ್ಯಾಭ್ಯಾಸ ಮುಗಿಸಿದ್ದ. ಶಿರಸಿಯಲ್ಲಿ ಪದವಿ ಮುಗಿಸಿ, ಯುಪಿಎಸ್​ಸಿ ಕನಸು ಹೊತ್ತು ಬೆಂಗಳೂರಿಗೆ ತೆರಳಿದ್ದ. ವಿಶೇಷವೆಂದರೆ, ಯಾವುದೇ ಪ್ರತಿಷ್ಠಿತ ಕೋಚಿಂಗ್ ಸೆಂಟರ್‌ಗಳ ನೆರವಿಲ್ಲದೆ, ಸ್ವಂತ ಪರಿಶ್ರಮದಿಂದ ಬಸವರಾಜ್ ತನ್ನ ಎರಡನೇ ಪ್ರಯತ್ನದಲ್ಲೇ ಅಖಿಲ ಭಾರತ ಮಟ್ಟದ ಅಗ್ರಸ್ಥಾನಕ್ಕೇರಿದ್ದಾನೆ.

ಗುರಿ ತಲುಪಲು ಛಲವಿದ್ದರೆ ಬಡತನ ಅಡ್ಡಿಯಾಗದು

ಈ ಕುರಿತು ಸಂತಸ ಹಂಚಿಕೊಂಡ ಬಸವರಾಜ್, ನಾನು ಗ್ರಾಮೀಣ ಭಾಗದವನು. ಮೊರಾರ್ಜಿ ಶಾಲೆಯಲ್ಲಿ ಓದಿದವನು. ಗುರಿ ತಲುಪುವ ಛಲವಿದ್ದರೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ನನ್ನ ಸಾಧನೆಯೇ ಸಾಕ್ಷಿ. ಈ ಹಂತ ತಲುಪಿದ್ದು ನನಗೆ ಅಪಾರ ಹೆಮ್ಮೆ ತಂದಿದೆ ಎಂದು ಖುಷಿಯಿಂದ ಹೇಳಿಕೊಂಡಿದ್ದಾನೆ.

ತಂದೆ ಧರೇಪ್ಪ ಕೆಂಪವಾಡ ಮಾತನಾಡಿ, ನಾವು ಸಣ್ಣ ರೈತ ಕುಟುಂಬದವರು. ಆರ್ಥಿಕ ಮುಗ್ಗಟ್ಟಿದ್ದರೂ ಮಕ್ಕಳ ಶಿಕ್ಷಣಕ್ಕೆ ಎಂದೂ ಕೊರತೆ ಮಾಡಲಿಲ್ಲ. ಗುತ್ತಿಗೆ ಆಧಾರದ ಮೇಲೆ ಜಮೀನು ಪಡೆದು ಕಷ್ಟಪಟ್ಟು ಮಗನನ್ನು ಓದಿಸಿದೆ. ಇಂದು ಅವನ ಸಾಧನೆಯಿಂದ ನಮ್ಮ ಬದುಕು ಸಾರ್ಥಕವಾಯಿತು” ಎಂದು ಭಾವುಕರಾಗಿ ನುಡಿದಿದ್ದಾರೆ. ರೈತ ಕುಟುಂಬದ ಕುಡಿಯೊಬ್ಬ ಈ ಮಟ್ಟಕ್ಕೆ ಬೆಳೆದದ್ದು ಕೇವಲ ಸವದಿ ಗ್ರಾಮಕ್ಕೆ ಮಾತ್ರವಲ್ಲದೆ ಇಡೀ ನಾಡಿಗೆ ಹೆಮ್ಮೆಯ ವಿಷಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್