LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೌಜಲಗಿಯಲ್ಲಿ ಬೃಹತ್ ಆರೋಗ್ಯ ಮೇಳ

ಕೌಜಲಗಿ: ಕೌಜಲಗಿ ಪಟ್ಟಣದಲ್ಲಿ ಏರ್ಪಟ್ಟ ಬೃಹತ್ ಆರೋಗ್ಯ ಮೇಳ ಈ ಭಾಗದ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾರಣವಾಗಲಿದ್ದು, ಕೌಜಲಗಿ ಪಟ್ಟಣ ಮತ್ತು ಸುತ್ತಮುತ್ತಲಿನ ೪೦ ಗ್ರಾಮಗಳ ಜನತೆಯ ಆರೋಗ್ಯ ಸುಧಾರಣೆಗಾಗಿ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರ ಉತ್ತಮವಾಗಿ ಕೆಲಸ ಮಾಡಲಿದೆ. ಸಮುದಾಯ ಆರೋಗ್ಯ ಕೇಂದ್ರಕ್ಕೆ ಅವಶ್ಯಕವಾಗಿರುವ ವೈದ್ಯರು ಮತ್ತು ಸಿಬ್ಬಂದಿ ವರ್ಗವನ್ನು ತುರ್ತಾಗಿ ನೇಮಕ ಮಾಡಲು ಬಾಲಚಂದ್ರಪ್ಪಾಜಿ ಅವರ ಮೂಲಕ ಸರ್ಕಾರಕ್ಕೆ ಒತ್ತಾಯಪಡಿಸುತ್ತೇವೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
 
ಕೌಜಲಗಿ ಪಟ್ಟಣದಲ್ಲಿ ಶುಕ್ರವಾರ ಬೆಳಗಾವಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೌಜಲಗಿಯ ರಂಜಿತ್ ಭೋವಿ ಫೌಂಡೇಶನ್, ವಾಯ್. ಎಲ್.ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ್, ದಿ. ಅಶೋಕ ಅಡಿವೆಪ್ಪ ಪರುಶೆಟ್ಟಿ ಫೌಂಡೇಶನ್ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿ, ಈ ಭಾಗದ ಬಡ ರೋಗಿಗಳ ಆರೋಗ್ಯ ಸುಧಾರಣೆಗಾಗಿ ಉಚಿತ ಆರೋಗ್ಯ ತಪಾಸಣಾದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಕಾರ್ಯ ಮಹತ್ವದ್ದಾಗಿದ್ದು, ಕೌಜಲಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು.
 
ಮುಖ್ಯ ಅತಿಥಿಗಳಾಗಿ ಮಾತನಾಡಿದ ಚಿಕ್ಕೋಡಿಯ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ಗಡೇದ ಅವರು, ಈ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂರಾರು ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆತಿದೆ. ಆಯು?ನ್ ಯೋಜನೆಯಡಿಯಲ್ಲಿಯೂ ಮೇಲ್ಮಟ್ಟದ ಖಾಸಗಿ ಸಂಸ್ಥೆಯಲ್ಲಿ ಸೇವೆ ದೊರೆಯಲಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ ಪಿ ಗಡಾದ ಅವರು, ಕೌಜಲಗಿ ಪಟ್ಟಣದಲ್ಲಿ ಇಂತಹ ಶಿಬಿರಗಳು ಜರುಗುವುದು ಅಪರೂಪ.

ಆ ಭಾಗ್ಯ ಕೌಜಲಗಿ ಹಾಗೂ ಸುತ್ತಲಿನ ಗ್ರಾಮಸ್ಥರಿಗೆ ಲಭಿಸಿದೆ. ಈ ಶಿಬಿರದಲ್ಲಿ ಅನೇಕ ಖಾಸಗಿ ಸಂಸ್ಥೆಯ ಅನೇಕ ತಜ್ಞ ವೈದ್ಯರು ನಮ್ಮ ಕೆರೆಗೆ ಓಗೊಟ್ಟು ಶಿಬಿರದಲ್ಲಿ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಪ್ರಥಮ ದರ್ಜೆ ಗುತ್ತಿಗೆದಾರ ಎಸ್. ಆರ್.ಭೋವಿ, ರವೀಂದ್ರ ಪರುಶೆಟ್ಟಿ, ಮಂಜುನಾಥ ಸಣ್ಣಕ್ಕಿ, ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ, ಚಿಕ್ಕೋಡಿ ಅಪರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ಗಡೇದ,ಡಾ. ಚಾಂದನಿ ದೇವಡಿ,ಡಾ. ವಿವೇಕ ಹೊನ್ನಳ್ಳಿ, ಡಾ. ಸಂಜಯ ದೊಡಮನಿ, ಡಾ. ಗೀತಾ ದಂಡಿನ,ಡಾ. ಸುಶೀಲಾ ಸಾಯನ್ನವರ,ಡಾ. ವಿಶ್ವನಾಥ ಭೋವಿ, ಡಾ.ಶ್ರೀಕಾಂತ ಸುಣಧೋಳಿ, ಗೋಕಾಕ ತಾಲೂಕ ಆರೋಗ್ಯ ಅಧಿಕಾರಿ ಡಾ. ಎಸ್.ಎಂ ಕೊಪ್ಪದ, ಜಿಲ್ಲಾ ಔ?ಧಿ ವಿತರಣಾ ಅಧಿಕಾರಿ ದಳವಾಯಿ ಸೇರಿದಂತೆ ಎಲ್ಲ ಜಿಲ್ಲಾ ಕಾರ್ಯಕ್ರಮ ಅನು?ನಾಧಿಕಾರಿಗಳು ಇದ್ದರು.

ಬೃಹತ್ ಆರೋಗ್ಯ ಮೇಳದಲ್ಲಿ ಕ್ಷಯರೋಗ ತಪಾಸನೆ, ರಕ್ತದಾನ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್ ಪರೀಕ್ಷೆ, ನೇತ್ರದಾನ ಮಾಹಿತಿ, ಲೈಂಗಿಕ ಕಾಯಿಲೆಗಳ ಆಪ್ತ ಸಮಾಲೋಚನೆ, ಅಸಾಂಕ್ರಾಮಿಕ ರೋಗಗಳ ಆಪ್ತ ಸಮಾಲೋಚನೆ, ಯೋಗ ಮತ್ತು ಧ್ಯಾನಗಳ ಮಾಹಿತಿ, ಹೃದಯ ರೋಗಕ್ಕೆ ಸಂಬಂಧಿಸಿದಂತೆ ಇಸಿಜಿ ಮತ್ತು ಇಕೋ ಪರೀಕ್ಷೆ, ಕ್ಯಾನ್ಸರ್ ಗೆ ಸಂಬಂಧಪಟ್ಟಂತೆ ಪ್ಯಾಪ್ ಲೇಪನಗಳ ಪರೀಕ್ಷೆ, ಆಯುರ್ವೇದ, ಯುನಾನಿ, ಹೋಮಿಯೋಪತಿ ಪದ್ಧತಿಯ ಚಿಕಿತ್ಸೆ ಮುಂತಾದವುಗಳ ಕುರಿತು ಶಿಬಿರದಲ್ಲಿ ಒಟ್ಟು ೫೫೦ ಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಆರೋಗ್ಯ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡಿ, ಅವಶ್ಯವಿದ್ದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಲಾಯಿತು.
 
ಕಾರ್ಯಕ್ರಮದಲ್ಲಿ ಬೆಳಗಾವಿಯ ಅರಿಹಂತ ಆಸ್ಪತ್ರೆ, ನೇತ್ರ ದರ್ಶನಿ ಆಸ್ಪತ್ರೆ, ಮರಾಠ ಮಂಡಲ ದಂತ ಮಹಾವಿದ್ಯಾಲಯ, ಕೆ.ಎಲ್.ಇ. ಕ್ಯಾನ್ಸರ್ ಆಸ್ಪತ್ರೆ ಹಾಗೂ ಇತರೆ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡು ಸಾರ್ವಜನಿಕರಿಗೆ ಆರೋಗ್ಯ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡಿದರು.

ಕೌಜಲಗಿ ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಉಚಿತವಾಗಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸರ್ವ ಸದಸ್ಯರು, ವೈದ್ಯಾಧಿಕಾರಿ ಡಾ. ಶ್ರೀನಿವಾಸ ಹಳ್ಳೂರ, ಡಾ.ಪ್ರಶಾಂತ ಸಣ್ಣಕ್ಕಿ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸ್ಥಳೀಯ ಸಂಘ ಸಂಸ್ಥೆಗಳ ಯುವಕರು ಇದ್ದರು. 
 
ಬೆಳಗಾವಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಶ್ವನಾಥ ಭೋವಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ 

ಪ್ರಕಾಶ ಮಾನೆ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸನಗೌಡ ಈಶ್ವರಪ್ಪಗೋಳ ವಂದಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್