LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜನರಿಗೆ ಉಪಯುಕ್ತವಾದ ಮೆಡಿಕಲ್,ಸಂಶೋಧನಾ ಕೇಂದ್ರ

 ಬೀಳಗಿ- ಬಾಗಲಕೋಟ ವಿಜಯಪುರ ಅವಳಿ ಜಿಲ್ಲೆಗಳ 400 ಗ್ರಾಮಗಳ ಜನರಿಗೆ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ ಬಹಳಷ್ಟು ಉಪಯುಕ್ತವಾಗಿದೆ ಎಂದು ಎಸ್.ಆರ್. ಪಾಟೀಲ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷ ಎಸ್. ಆರ್. ಪಾಟೀಲ ಹೇಳಿದರು.
ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ  ತಾಲ್ಲೂಕಿನ ಬಾಡಗಂಡಿ ಗ್ರಾಮದಲ್ಲಿರುವ ಎಸ್. ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ₹35 ಲಕ್ಷ ವೆಚ್ಚದ ನೂತನ ALS (Advanced Life Support) ಆಂಬುಲೆನ್ಸ್ ಸೇವೆಗೆ  ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಅತ್ಯಾಧುನಿಕ ಜೀವ ರಕ್ಷಕ ವೈದ್ಯಕೀಯ ಉಪಕರಣಗಳನ್ನು ಹೊಂದಿರುವ ಈ ಆಂಬುಲೆನ್ಸ್, ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಆಸ್ಪತ್ರೆ ತಲುಪುವ ಮುನ್ನವೇ ಅಗತ್ಯ ಚಿಕಿತ್ಸೆಯನ್ನು ಒದಗಿಸಲು ನೆರವಾಗಲಿದ್ದು, ಸಾರ್ವಜನಿಕರಿಗೆ ಗುಣಮಟ್ಟದ ತುರ್ತು ಆರೋಗ್ಯ ಸೇವೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಆಸ್ಪತ್ರೆಯ ಎಲ್ಲ ವೈದ್ಯರಿಗೆ ವೈದ್ಯರ ದಿನಾಚರಣೆ ಶುಭಾಶಯ ಕೋರಿದ ಅವರು ದುಬಾರಿ ವೆಚ್ಚದ ಅಲ್ಟ್ರಾ ಸೌಂಡ್ ಮತ್ತು ಎಕ್ಸರೆಯನ್ನು  ಈ ಆಸ್ಪತ್ರೆಯಲ್ಲಿ ಉಚಿತವಾಗಿ ಒದಗಿಸುವ ಮೂಲಕ ರೋಗಿಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತಿದ್ದೆವೆ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಎಂ ಎನ್ ಪಾಟೀಲ್ ಮಾತನಾಡಿ ಸುತ್ತಲಿನ ನೂರಾರು ಹಳ್ಳಿಗಳ ಜನ ಕಿಡ್ನಿ ಅಥವಾ ಹೃದಯ ತೊಂದರೆಯಂಥ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ದೂರದ ನಗರಗಳಿಗೆ ಹೋಗಬೇಕಾಗಿತ್ತು. ಸದ್ಯ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಿಂದ ಈ ಸಮಸ್ಯೆಗೆ ಪರಿಹಾರವಾಗಿದೆ. ಮುಂದಿನ ದಿನಗಳಲ್ಲಿ ಬಡ ಜನತೆಗೆ ಇನ್ನಷ್ಟು ಆಧುನಿಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಗುರಿ ನಮ್ಮದಾಗಿದೆ ಎಂದರು.
ವೈದ್ಯಕೀಯ ಅಧಿಕ್ಷಕ ವಿಜಯಾನಂದ ಹಳ್ಳಿ, ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ, ಎಸ್ಆರ್ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ,ಆಸ್ಪತ್ರೆಯ ಪ್ರಾಚಾರ್ಯ ಅಹ್ಮದ ಅಸ್ಲಾಂ, ಎಸ್ಆರ್ ಪಾಟೀಲ್ ಆಯುರ್ವೇದಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಸಿ.ಆರ್. ಪೂಜಾರಿ,  ನಿರ್ದೇಶಕಿ ರಾಜೇಶ್ವರಿ ಬಿರಾದಾರ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ