LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಾಲಘಟ್ಟವನ್ನೂ ಮೀರಿದ  ಅಪ್ರತಿಮ ಪ್ರೇಮ ಕಥೆಯ ಚಿತ್ರ A 

   ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ 'A'.  ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು 'A' ಚಿತ್ರ ರೀ ರಿಲೀಸ್ ಆಗಿದೆ.

     ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ.


"ಇದು ನಾಯಕಿಯಾಗಿ ನನ್ನ ಜೀವನವನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಅಂತ ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ" ಎಂದಿದ್ದಾರೆ.


       ನಾಯಕಿ ಚಾಂದಿನಿ 'A' ಸಿನಿಮಾದಲ್ಲಿ ಹೇಗಿದ್ದರೋ, ನೋಡಲು ಈಗಲು ಹಾಗೆ ಇದ್ದಾರೆ. ಅದಕ್ಕೆ ಅವರು ನೀಡುವ ಕಾರಣ, "ನನ್ನ ಜೀವನವನ್ನೇ ಬದಲಿಸಿದಂತಹ ಸಿನಿಮಾ ಅದು. ಅದರಿಂದ ನನಗೆ ಸಿಕ್ಕ ಕನ್ನಡ ಜನರ ಪ್ರೀತಿ ಹಾಗು ಆ ಸಿನಿಮಾದ ಅ ಒಂದು ಫೇಮಸ್ ಡೈಲಾಗ್ 'GOD IS GREAT' ಅನ್ನುವ ಹಾಗೆ, ಈ ಎರೆಡರ ಆಶೀರ್ವಾದದಿಂದ ನಾನು ಇವತ್ತಿಗೂ 'A' ಚಾಂದಿನಿ ರೀತಿಯಲ್ಲೆ ಇದ್ದೀನಿ. ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ 'A" ಅಂತಾರೆ ನಾಯಕಿ.


     "ಪ್ರಬುದ್ಧ ನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳೇ ಇಲ್ಲ‌. ಅಂದಿಗು ಇಂದಿಗೂ ನನ್ನ ಮೆಚ್ಚಿನ ನಿರ್ದೇಶಕ ಉಪೇಂದ್ರ ಅವರು. ಗುರುಕಿರಣ್ ಅವರ ಸಂಗೀತದಲ್ಲಿ ಮೂಡಿಬಂದಿರುವ 'A' ಚಿತ್ರದ ಹಾಡುಗಳು ಈಗಲೂ ಜನಪ್ರಿಯ.  ಕನ್ನಡಿಗರು 'A' ಚಿತ್ರದಿಂದ ಇಲ್ಲಿಯವರೆಗೂ ನನಗೆ ತೋರುತ್ತಿರುವ ಪ್ರೀತಿಗೆ ಚಿರಋಣಿ. ಇಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ರೀ ರಿಲೀಸ್ ನಲ್ಲೂ ಚಿತ್ರ ಭರ್ಜರಿ ಯಶಸ್ಸು ಕಾಣಲಿ" ಎಂದಿರುವ ನಾಯಕಿ ಚಾಂದಿನಿ "ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಚಿತ್ರಗಳಲ್ಲಿ ನಟಿಸುತ್ತೇನೆ" ಎನ್ನುತ್ತಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್