LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಒಂದೇ ವಾರದಲ್ಲಿ ಎರಡು ಬಾರಿಗೆ ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್​

ಬೆಂಗಳೂರು, ಜೂನ್​ 19: ಕಳೆದು ಒಂದು ತಿಂಗಳಿಂದ ಕರ್ನಾಟಕದ ಹಲವೆಡೆ ಕಿಡಿಗೇಡಿಗಳಿಂದ ಹುಸಿ ಬಾಂಬ್​ ಬೆದರಿಕೆಯ ಇ-ಮೇಲ್​ಗಳು ಬಂದಿವೆ. ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ ಹಲವು ಶಾಲೆಗಳು ಮತ್ತು ಪ್ರತಿಷ್ಠಿತ ಹೋಟೆಲ್​​ಗಳಿಗೂ ಬಾಂಬ್​​ ಬೆದರಿಕೆ ಬಂದಿತ್ತು. ಅಷ್ಟೇ ಅಲ್ಲದೆ ಒಂದೇ ವಾರದಲ್ಲಿ ಎರಡೆರಡು ಬಾರಿಗೆ ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್​ ಬಂದಿದೆ. ಹೀಗಾಗಿ ಜನರಲ್ಲಿ ಆತಂಕ ಶುರುವಾಗಿದೆ.

ನಗರದಲ್ಲಿ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಹುಸಿ ಬಾಂಬ್ ಮೇಲ್​ಗಳು ಮತ್ತೆ ಆಕ್ಟೀವ್​ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಮತ್ತೊಂದು ಹುಸಿ ಬಾಂಬ್​ ಮೇಲ್​ ಬಂದಿದೆ. ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು.

ಏರ್​​ಪೋರ್ಟ್​ ಭದ್ರತಾ ಪಡೆಗೆ ಮೇಲ್​ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್​ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್