LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಜೆ. ಎ. ಶಿಕ್ಷಣ ಸಂಸ್ಥೆಯ ಇತಿಹಾಸದಲ್ಲಿಯೇ ದಾಖಲೆಯ ಫಲಿತಾಂಶ"

ಅಥಣಿ : ಅತ್ಯಂತ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಜಾಧವಜಿ ಶಿಕ್ಷಣ ಸಂಸ್ಥೆಯು ಈ ಬಾರಿ ಪದವಿ ಪೂರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮೆಲ್ಲರಿಗೆ ಹೆಮ್ಮೆ ಮತ್ತು ಸಂತಸ ತಂದಿದೆ ಎಂದು ಸಂಸ್ಥೆಯ ಕಾರ್ಯಧ್ಯಕ್ಷ ಡಾ. ರಾಮ್ ಬಿ ಕುಲಕರ್ಣಿ ಸಂತಸ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಜೆ. ಇ . ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಿಂದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಮಾನೋತ್ಸವ ಆಚರಿಸಿಕೊಂಡ ನಮ್ಮ ಜಾದವಜಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಯುಸಿ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶವನ್ನು ನೀಡಿದ್ದು, ಶೇ. ೯೩.೫೧ ರಷ್ಟು ಫಲಿತಾಂಶವಾಗಿದೆ ಎಂದು ಹೇಳಿದರು.

ರಾಜ್ಯಮಟ್ಟಕ್ಕೆ ರ?ಯಾಂಕ್ : ಕಲಾ ವಿಭಾಗದಲ್ಲಿ ಕು. ಶಿವಾನಂದ ಮುರಿಗೆಪ್ಪ ಬುರ್ಲಟ್ಟಿ ೫೯೫/೬೦೦ ಅಂಕಗಳನ್ನು ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೨ನೇ ರ?ಯಾಂಕ್ ಪಡೆದು ನಮ್ಮ ಸಂಸ್ಥೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಪರಿಚಯಿಸಿದ್ದಾನೆ. ಈ ಆದ್ವಿತೀಯ ಸಾಧನೆ ಮಾಡಿದ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸುವ ಮೂಲಕ ಆತನ ಮುಂದಿನ ಶಿಕ್ಷಣಕ್ಕೆ ಸಂಸ್ಥೆಯ ಮೂಲಕ ಆರ್ಥಿಕ ನೆರವು ನೀಡಲಾಗುವುದು ಕು. ಅನನ್ಯಾ ರಮೇಶ್ ಪೂಜಾರಿ ೫೮೯/೬೦೦ ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಕು. ಸ್ನೇಹಲ ರಾಮದಾಸ ಪಾಟೀಲ ೫೮೫/೬೦೦ಅಂಕಗಳನ್ನ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ವಾಣಿಜ್ಯ ವಿಭಾಗದಲ್ಲಿ ಕು. ಭಕ್ತಿ ಈಲವಕರ ೫೯೦ ಅಂಕ ಪಡೆದು ಪ್ರಥಮ, ಕು.ಶ್ರೇಯಾ ಪವಾರ ೫೮೦ ಅಂಕ ಪಡೆದು ದ್ವಿತೀಯ, ಕು. ಚಂಪವ್ವ ತಂವಶಿ ೫೭೭ ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ವಿಜ್ಞಾನ ವಿಭಾಗದಲ್ಲಿ ಕು. ಅಭಿನವ ಕುಲಕರ್ಣಿ ೫೮೭ ಅಂಕ ಪಡೆದು ತಾಲೂಕಿಗೆ ಪ್ರಥಮ, ಕು. ಪ್ರೀತಿ ಪೂಜಾರಿ ೫೮೫ ಅಂಕ ಪಡೆದು ದ್ವಿತೀಯ, ಕು. ಸಮೀಕ್ಷಾ ಕವಟೆಕರ ೫೮೧ ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ನಮ್ಮ ಸಂಸ್ಥೆಯ ೪೦ ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ೧೦೦ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಉತ್ತಮ ಮಾರ್ಗದರ್ಶನ ಮಾಡಿದ ಎಲ್ಲ ಉಪನ್ಯಾಸಕರಿಗೆ, ಪರಿಶ್ರಮವಹಿಸಿ ಉತ್ತಮ ಸಾಧನೆ ಮಾಡಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸುವ ಎಲ್ಲ ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು.

ಸಂಸ್ಥೆಯ ಉಪ ಕಾರ್ಯಧ್ಯಕ್ಷ ಹಾಗೂ ನ್ಯಾಯವಾದಿ ಸಂದೀಪ ಸಂಗೋರಾಮ ಮಾತನಾಡಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಮಾಡಿರುವ ಸಾಧನೆ ಐತಿಹಾಸಿಕ ಮತ್ತು ನಮ್ಮ ಸಂಸ್ಥೆಯ ಇತಿಹಾಸದಲ್ಲಿ ಇದೊಂದು ಮೈಲುಗಲ್ಲಾಗಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ. ಅತ್ಯಂತ ಕಡು ಬಡತನದ ವಿದ್ಯಾರ್ಥಿ ಶಿವಾನಂದ ಬುರ್ಲಟ್ಟಿ ಮಾಡಿದ ಸಾಧನೆಗೆ ನಮ್ಮ ಸಂಸ್ಥೆ ಆಭಾರಿಯಾಗಿದೆ. ಇಂತಹ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಯಾವತ್ತೂ ಸಹಾಯ ಹಸ್ತ ನೀಡುತ್ತಾ ಬಂದಿದೆ. ಈ ವಿದ್ಯಾರ್ಥಿಯ ಮುಂದಿನ ಶಿಕ್ಷಣಕ್ಕೆ ಸಂಸ್ಥೆಯ ಮೂಲಕ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದ ಅವರು ನಮ್ಮ ಸಂಸ್ಥೆಯಲ್ಲಿ ಯಾವುದೇ ಸುಂಕ ಪಡೆಯದೆ ಉಚಿತವಾಗಿ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದೆ. ಡಿಜಿಟಲ್ ಗ್ರಂಥಾಲಯ ಹಾಗೂ ಡಿಜಿಟಲ್ ಕ್ಲಾಸ್ ಗಳ ಸೌಲಭ್ಯವನ್ನು, ನುರಿತ ಉಪನ್ಯಾಸಕರ ಮಾರ್ಗದರ್ಶನ ನಮ್ಮ ಸಂಸ್ಥೆಯಲ್ಲಿ ಇರುವುದರಿಂದ ಇಂತಹ ಸಾಧನೆಗೆ ಪೂರಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಡಾ. ರಾಮ ಕುಲಕರ್ಣಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ರವಿ ಕುಲಕರ್ಣಿ, ಸಹ ಕಾರ್ಯದರ್ಶಿ ಆನಂದ ಟೋಣಪಿ, ಹಿರಿಯ ಸದಸ್ಯರಾದ ಎಸ್. ಎಂ ಪಾಟೀಲ, ಅನೀಲ ದೇಶಪಾಂಡೆ, ಎಂ. ವಿ ಜೋಶಿ, ಡಾ. ಅವಿನಾಶ ನಾಯಿಕ, ಹಿಮಾoಶು ಬಾಟೆ, ಅಥರ್ವ ದೇಶಪಾಂಡೆ, ಡಾ.ಶ್ರೀವತ್ಸ ಕುಲಕರ್ಣಿ, ಡಾ. ವಿಶ್ವನಾಥ ಕುಲಕರ್ಣಿ, ಪ್ರಾಚಾರ್ಯ ಎಂ. ಪಿ ಮೇತ್ರಿ, ಆಡಳಿತಾಧಿಕಾರಿ ಉದಯಕುಮಾರ ಕೋಠಿವಾಲೆ, ಹಾಗೂ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ಸಾಧಕ ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್