ಯುವತಿ ಮೇಲೆ ಅತ್ಯಾಚಾರ ಹಾಗೂ ಹಲವು ಕೊಲೆಯ ಪ್ರಕರಣದಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಕೊಲೆ ಹಂತಕನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ಪೊಲೀಸರು ಸೀರಿಯಲ್ ಕಿಲ್ಲರ್ನನ್ನು ಬಂಧಿಸಿದ್ದಾರೆ. ಹರ್ಯಾಣದ ರೋಹ್ಟಕ್‌ನ ರಾಹುಲ್ ಜಾಟ್ ಎಂಬಾತ 19 ವರ್ಷದ ಯುವತಿಯನ್ನು ಕೊಲೆ ಮಾಡಿದ್ದ ಆಕೆಯ ಶವ ಉದ್ವಾಡ ರೈಲು ನಿಲ್ದಾಣದ ಸಮೀಪವಿರುವ ಹಳಿಯ ಮೇಲೆ ನವೆಂಬರ್ 14ರಂದು ಪತ್ತೆಯಾಗಿತ್ತು.
ಆಕೆ ಟ್ಯೂಷನ್ನಿಂದ ಮನೆಗೆ ಹೋಗುವಾಗ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಲ್ಸಾದ್ನ ವಾಪಿ ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಿಂದ ಸ್ಥಳೀಯ ಮತ್ತು ರೈಲ್ವೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಹುಲ್ ಜಾಟ್ನನ್ನು ಬಂಧಿಸಲಾಯಿತು.
ಜಾಟ್ ಪದೇ ಪದೇ ತಾನಿರುವ ಸ್ಥಳವನ್ನು ಬದಲಾಯಿಸುತ್ತಿದ್ದ. ಆತ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ರೈಲುಗಳು ಮತ್ತು ರೈಲು ನಿಲ್ದಾಣಗಳಲ್ಲಿ ಲೂಟಿ ಮತ್ತು ಕೊಲೆ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.