LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವೃತ್ತಿಪರ ಕೋರ್ಸ್​ಗಳ ನೋಂದಣಿಗೆ ಆಧಾರ್​ ಲಿಂಕ್ಡ್​ ಕಡ್ಡಾಯ: ಕೆಇಎ ಪ್ರಸ್ತಾವನೆ

ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್​ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ.


ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾಪದ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ನಮ್ಮ ಪ್ರಸ್ತಾಪವನ್ನು ಭಾರತ ಸರ್ಕಾರಕ್ಕೆ ಕಳುಹಿಸಿದ್ದಾರೆ. ಶೀಘ್ರದಲ್ಲೇ ಅನುಮೋದನೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪಿಟಿಐಗೆ ತಿಳಿಸಿದ್ದಾರೆ.


ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ: "ಅಧಿಕೃತತೆಯನ್ನು ಖಚಿತಪಡಿಸಿಕೊಳ್ಳಲು, ನೋಂದಣಿಯಲ್ಲಿ ಯಾವುದೇ ವಂಚನೆಯನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್​ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ" ಎಂದು ಅವರು ಹೇಳಿದರು.


ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ಪ್ರಸನ್ನ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್