LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗೆ ಕ್ರಮ 

ಬಾಗಲಕೋಟೆ, ಜೂನ್ ೧೨  : ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳು ಸಮಪರ್ಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವದರ ಜೊತೆಗೆ ನಕಲಿ ಕೃಷಿ ಪರಿಕರಗಳ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದರು.
ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳು ದೊರೆಯುವಂತೆ ಮಾಡುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ನಕಲಿ ಬಿತ್ತನೆ ಬೀಜ, ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟದಿಂದ ರೈತರು ಅಪಾರ ಪ್ರಮಾಣದಲ್ಲಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ದ ನಿರ್ದಾಕ್ಷಣ್ಯವಾಗಿ ಕಠಿಣ ಕಾನೂನು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಕಳೆದ ೨೦೨೫-೨೬ನೇ ಸಾಲಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮಾರಾಟ, ದಾಸ್ತಾನು ಮತ್ತು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಒಟ್ಟು ೧೫ ಪ್ರಕರಣ ಹಾಗೂ ಕಳಪೆ ಮಟ್ಟದ ಬೀಜದ ಮಾದರಿಗಳ ಸಂಖ್ಯೆ ೬ ಇದ್ದು, ೬ ಪ್ರಕರಣ ದಾಖಲಿಸಲಾಗಿದೆ.  ಕಳಪೆ ಮಟ್ಟದ ರಸಗೊಬ್ಬರ ಮಾದರಿ ಸಂಖ್ಯೆ ೧೭ ಇದ್ದು, ಅದರಲ್ಲಿ ೧೧ರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ೩ ಪ್ರಕರಣಗಳ ಮೇಲೆ ಎಫ್‌ಐಆರ್ ಕೂಡಾ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅನಧಿಕೃತ ದಾಸ್ತಾನು ಹಾಗೂ ಸಿಐಆರ್ ನೋಂದಣಿಯಾಗದ ಕೀಟನಾಶಕ ಅಂಗಡಿ ಮೇಲೆ ತಲಾ ಒಂದು ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ಸಭೆಗೆ ಮಾಹಿತಿ ನೀಡಿದರು. 
ಬೀಜ ರಸಗೊಬ್ಬರ ಮತ್ತು ಕೀಟನಾಶಕಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿಶೇಷ ತಪಾಸಣಾ ತಂಡಗಳು ಮಾರಾಟ ಮಳಿಗೆಗಳ ಮೇಲೆ ನಿರಂತರವಾಗಿ ನಿವಾ ವಹಿಸಬೇಕು. ಕೃಷಿ, ತೋಟಗಾರಿಕೆ, ಸಹಕಾರ, ಕಾನೂನು ಮಾಪನಶಾಸ್ತ್ರ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಪರವಾನಗಿ, ದಾಸ್ತಾನು ಹಾಗೂ ಮಾರಾಟ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಎಸ್.ಎಂ.ಕೋರೆ, ಸಹಕಾರ ಇಲಾಖೆಯ ಉಪ ನಿಬಂಧಕ ದಾನಯ್ಯ ಹಿರೇಮಠ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಬಾಗಲಕೋಟೆ ಕೃಷಿ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಅಗಸನಾಳ, ಜಮಖಂಡಿ ವಿಭಾಗದ ಉಪನಿರ್ದೇಶಕಿ ಮಂಜುಳಾ ಬಸರಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. 
 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ