LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಮನ್ವಯತೆಯಿಂದ ಕೆಲಸ ಮಾಡಲು ಎಡಿಸಿ ಡಾ. ಔದ್ರಾಮ ಸೂಚನೆ

ವಿಜಯಪುರ, ಮೇ ೧3: ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಪುರಾತತ್ತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕದ ಪ್ರಾಚೀನ ಹಸ್ತ ಪ್ರತಿಗಳ ಸಮೀಕ್ಷೆಯಡಿ ಡಿಜೀಟಲೀಕರಣ ಮೇ -೨೦೨೬ ರ ತನಕ ನಡೆಯಲಿದ್ದು, ಸಮೀಕ್ಷೆಯ ಸಮರ್ಪಕ ಜಾರಿಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ, ಅವರು ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ದೇಶದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ ಡಿಜಿಟಲೀಕರಣ ಮಾಡುವ ಕೆಲಸ ನಡೆಯುತ್ತಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಶಾಶ್ವತವಾಗಿ ಉಳಿಸುವುದರ ಜೊತೆಗೆ ಸಾರ್ವಜನಿಕರಿಗೆ ಒಂದೇ ರಾಷ್ಟ್ರೀಯ ವೇದಿಕೆ ಮೂಲಕ ಪ್ರವೇಶ ಕಲ್ಪಿಸುವುದಾಗಿದೆ ಎಂದರು.
ಈ ಯೋಜನೆಯಡಿ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನ ಮತ್ತು ಮೊಬೈಲ್ ಪ್ರಕಟಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಅಪ್ಲಿಕೇಷನ್ ಮೂಲಕ ದೇಶದಾದ್ಯಂತ ಇರುವ ಹಸ್ತಪ್ರತಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಿ ರಾಷ್ಟ್ರೀಯ ಹಸ್ತಪ್ರತಿ ಭಂಡಾರದಲ್ಲಿ ಸಂಗ್ರಹಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಹಂಚಿಕೊಳ್ಳುವ ಯೋಜನೆ ರೂಪಿಸಲಾಗಿದೆ ಎಂದರು. ಈ ಯೋಜನೆಗೆ ಜಿಲ್ಲೆಯಲ್ಲಿ ಸಂಯೋಜಕರಾಗಿ ಕೃಷ್ಣಕೋಲಾರ ಕುಲಕರ್ಣಿ -೯೩೪೨೦೧೮೪೭೦, ಪಂಡಿತ ಪ್ರದ್ಯುಮ್ನಾಚಾರ್ಯ ಪೂಜಾರ -ಸದಸ್ಯರು -೯೯೮೬೩೦೧೦೮, ಡಾ: ವೇದನಿಧಿ ಆಚಾರ್ಯ - ಸದಸ್ಯರು -೯೪೮೦೩೧೨೪೦೮, ಪಂಡಿತ ಸಂಜೀವಾಚಾರ್ಯ ಮದಭಾವಿ - ಸದಸ್ಯರು-೯೪೪೯೧೮೩೮೬೯ ಅವರಿಗೆ ಸಂಬಂಧಿಸಿದ ಅಧಿಕಾರಿಗಳು, ಗ್ರಂಥಾಲಯಗಳು, ದೇವಾಲಯಗಳು, ಮಠಗಳು, ಸೂಫಿ ಸಂತರು ಮಸೀದಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಮನೆಗಳಲ್ಲಿ ಖಾಸಗಿ ಸಂಗ್ರಹಗಳಲ್ಲಿ ಹಸ್ತಪ್ರತಿಗಳ ಗುರುತುಪಡಿಸುವಿಕೆ, ಸಂಗ್ರಹ ಸ್ಥಳಗಳಿಗೆ ಪ್ರವೇಶ ಕಲ್ಪಿಸಿ ಸಮೀಕ್ಷೆಗೆ ಸಹಕಾರ ಕಲ್ಪಿಅಬೇಕು ಎಂದರು. ದಾಖಲೀಕರಣ ಮತ್ತು ಪಟ್ಟಿ ಮಾಡುವಿಕೆ ಕಾರ್ಯಗಳಿಗೆ ಸಹಾಯ, ಸ್ಥಳೀಯ ಸಂಸ್ಥೆಗಳು ಹಾಗೂ ಸಂರಕ್ಷಕರಲ್ಲಿ ಜಾಗೃತಿ ಮೂಡಿಸುವಿಕೆ, ನಿಯಮಿತ ಪ್ರಗತಿ ವರದಿ ಸಲ್ಲಿಕೆಯಾಗಬೇಕು. ಈ ಅಮೂಲ್ಯ ಪ್ರಾಚೀನ ಹಸ್ತಪ್ರತಿಗಳ ಮಾಹಿತಿಯನ್ನು ಸಾರ್ವಜನಿಕರು ಒದಗಿಸಲು ಹಾಗೂ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು  ಸಾರ್ವಜನಿಕರಿಗೆ ಮನವಿ ಮಾಡಿದರು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ, ಪಂ. ಡಾ.  ವೇದನಿಧಿ ಆಚಾರ್ಯ, ಪಂ. ಪುದ್ಯುಮ್ನಾಚಾರ್ಯ ಪೂಜಾರ,   ಪ್ರವಾಸಿ ಪ್ರಚಾರ ಅಧಿಕಾರಿ ಬಿ.ಎಚ್.ಕುಡಪಲಿ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ : ೯೮೮೬೩೭೩೦೦೬ ಸಂಪರ್ಕಿಸಬಹುದಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್