LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಗಸ್ಟ ೫ ರಂದು ವ್ಯಸನ ಮುಕ್ತ ದಿನಾಚರಣೆ : ಡಿಸಿ ಸಂಗಪ್ಪ

ಬಾಗಲಕೋಟೆ, ಜುಲೈ ೨೮: ಡಾ.ಮಹಾಂತ ಶ್ರೀಗಳ ಜನ್ಮದಿನಾಚರಣೆ ಅಂಗವಾಗಿ ಆಗಸ್ಟ ೫ ರಂದು ವ್ಯಸನ ಮುಕ್ತ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ ೫ ರಂದು ಹಮ್ಮಿಕೊಳ್ಳಲಾಗಿದೆ. ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಆಗಸ್ಟ ೧ ರಂದು ಕಾರ್ಯಕ್ರಮ ಆಯೋಜನೆ ಮಾಡಲು ತಿಳಿಸಿದರು.
ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ನಿಷ್ಠಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ, ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಕೆ, ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಯಿತು, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಕರೆಯಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. 
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯುವಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ವ್ಯಸನದಿಂದ ದೂರವಿರುವಂತೆ ಪ್ರೇರೇಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಕಾಲೇಜು ಹಂತದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಗೆ ಅಗತ್ಯ ಎಲ್ಲ ಸಿದ್ದತೆಗಳನ್ನು ಕೈಗೊಳ್ಳುವಂತೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜೀತ್ ಮನ್ನಿಕೇರಿ, ಜಿಲ್ಲಾ ಪಂಚಾಯತ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಆಯೋಗ್ಯ ಇಲಾಖೆಯ ಶಿವನಗೌಡ ಪಾಟೀಲ, ಇಲಕಲ್ಲ ಮಹಾಂತ ಶಿವಯೋಗಿಗಳ ಮಠದ ಪ್ರತಿನಿಧಿಯಾಗಿ ಜಿ.ಎಸ್.ಗೌಡರ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್