LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿವಶರಣ ಹಡಪದ ಹಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಬಣ್ಣನೆ



ವಿಜಯನಗರ(ಹೊಸಪೇಟೆ) ಜು.೩೦: ೧೨ನೇ ಶತಮಾನದಲ್ಲೇ ರಕ್ತ ಕ್ರಾಂತಿಯ ಬದಲು ವೈಚಾರಿಕ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶಿವಶರಣ ಹಡಪದ ಅಪ್ಪಣ್ಣನವರ ತತ್ವಗಳು ಮತ್ತು ಚಿಂತನೆಗಳು ಇಂದಿನ ಆಧುನಿಕ ಯುಗಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.
ತಾಲೂಕಿನ ಅನಂತಶನಯನಗುಡಿ ರಾಯಣ್ಣ ಕಾಲೋನಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಅನುಭವ ಮಂಟಪದಲ್ಲಿ ಬಸವಣ್ಣನವರ ಜೊತೆಗೂಡಿ ಕಾರ್ಯನಿರ್ವಹಿಸಿದ ಹಡಪದ ಅಪ್ಪಣ್ಣನವರು, ಅಂದಿನ ಕಾಲದ ಮೌಢ್ಯತೆ, ಅಂಧಶ್ರದ್ಧೆ ಮತ್ತು ವರ್ಣಾಶ್ರಮ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದರು. ಶಸ್ತ್ರಾಸ್ತ್ರಗಳ ರಕ್ತ ಕ್ರಾಂತಿ ಮಾಡದೆ, ಆಲೋಚನೆ ಮತ್ತು ವಿಚಾರಗಳ ಮೂಲಕ ವೈಚಾರಿಕ ಕ್ರಾಂತಿ ಹುಟ್ಟುಹಾಕಿದರು. ಅಂದಿನ ಕಾಲದಲ್ಲಿ ಜನರ ಕಾಯಕ, ವೃತ್ತಿಯ ಆಧಾರದ ಮೇಲೆ ಮೇಲು-ಕೀಳು ಎಂಬ ತಾರತಮ್ಯ ಮಾಡುವ ವ್ಯವಸ್ಥೆಯಿತ್ತು. ಆದರೆ ಅನುಭವ ಮಂಟಪದ ಮೂಲಕ ಪ್ರತಿಯೊಬ್ಬ ವ್ಯಕ್ತಿಯ ಪ್ರತಿಭೆ ಮತ್ತು ಕಾಯಕಕ್ಕೆ ಆದ್ಯತೆ ನೀಡಿ, ಸರ್ವರಿಗೂ ಸಮಬಾಳು-ಸಮಪಾಲು ಎಂಬ ತತ್ವ ಸಾರಿದರು. ಪ್ರಸ್ತುತ ಆಧುನಿಕ ತಂತ್ರಜ್ಞಾನ ಬೆಳೆದಿದ್ದರೂ ಸಹ, ಸಂವಿಧಾನದ ಮೂಲಭೂತ ಹಕ್ಕುಗಳು ನಮ್ಮ ಮುಂದಿದ್ದರೂ ಇಂದಿಗೂ ಸಮಾಜದಲ್ಲಿ ಅಸಮಾನತೆ ಕಾಣಸಿಗುತ್ತಿವೆ. ಇಂತಹ ಸಂದರ್ಭದಲ್ಲಿ ಹಡಪದ ಅಪ್ಪಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವುದು ಮತ್ತು ಅವರ ವಚನಗಳ, ತತ್ವಾದರ್ಶಗಳು
ಮೈಗೂಡಿಸಿಕೊಳ್ಳಬೇಕು ಎಂದರು.
ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಬಸ್ವರಾಜ್ ಟಿ.ಹೆಚ್ ಉಪನ್ಯಾಸ ನೀಡಿದರು. ಸಿದ್ದಲಿಂಗಸ್ವಾಮಿ ಕೊಟ್ಟೂರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಜಾಗತಿಕ ಲಿಂಗಾಯತ ಮಹಸಭೆ ಜಿಲ್ಲಾಧ್ಯಕ್ಷ ಮಾವಿನಹಳ್ಳಿ ಬಸವರಾಜ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ್, ಬಸವ ಬಳಗದ ಅಧ್ಯಕ್ಷ ಬಸವ ಕಿರಣ ಸ್ವಾಮಿ, ಹಡಪದ ಹಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಮಲ್ಲಪ್ಪ, ಕಾರ್ಯದರ್ಶಿ ಕೊಟ್ರೇಶಪ್ಪ ಹೆಚ್. ಗೌರವಾದ್ಯಕ್ಷ ಈರಪ್ಪ ಹೆಚ್ ಮಲಪನಗುಡಿ ಸೇರಿದಂತೆ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್