LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅನೈತಿಕ ಸಂಬಂಧ ಶಂಕಿಸಿ - ಪತ್ನಿ ಕೊಲೆಗೈದ ಪತಿ

 ಬೀಳಗಿ-  ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿ ಸ್ಟೀಲ್ ರಾಡ್‌ದಿಂದ ಹೊಡೆದು ಕುತ್ತಿಗೆಗೆ ಸೀರೆ ಬಿಗಿದು ಜಂತಿಗೆ ನೇಣು ಹಾಕಿ ಕೊಲೆ ಮಾಡಿರುವ ಘಟನೆ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.
ಭಾಗ್ಯಶ್ರೀ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ. ಪತಿಯಿಂದ ಕೊಲೆಯಾದ ದುರ್ದೈವಿ ಪತ್ನಿ ಭಾಗ್ಯಶ್ರೀ ಜಿಗಳೂರ (೨೩). ಕೊಲೆ ಮಾಡಿ ನೇಣು ಹಾಕಿದ ಪತಿ ಪ್ರವೀಣ ಜಗಳೂರ (೨೯). ಕೊಲೆಯಾದ ಸ್ಥಳದಲ್ಲಿದ್ದ ಪತಿ, ಭಾಗ್ಯಶ್ರೀ  ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಎಂದು ಬಿಂಬಿಸುವ ಉದ್ದೇಶದಿಂದ
 ಮೊಬೈಲ್‌ನಲ್ಲಿ ವಿಡಿಯೋ ಚಿತ್ರಿಕರಿಸಿ ಪತ್ನಿಯ ಸಂಬಂಕರಿಗೆ ಕಳುಹಿಸಿದ್ದಾನೆ,ಇವರಿಬ್ಬರು ಮದುವೆಯಾಗಿ ಆರು ವರ್ಷ ಕಳೆದಿದ್ದು ಇವರಿಗೆ ಒಂದು ಗಂಡು ಮಗುವಿದೆ. ಈ ಹಿಂದೆ ಪತಿ, ಪತ್ನಿಯ ಮಧ್ಯೆ ಜಗಳ ನಡೆದಿದ್ದು, ಕೆಲ ದಿನಗಳ ಹಿಂದೆ ಭಾಗ್ಯಶ್ರೀ ತವರು ಮನೆಗೆ ತೆರಳಿದ್ದರು. ತವರು ಮನೆಯಿಂದ ಹೆಂಡತಿ ಕರೆ ತಂದಿದ್ದ ಪತಿ ಪ್ರವೀಣ ಹಾಗೂ ಭಾಗ್ಯಶ್ರೀ ಮಧ್ಯೆ ಮತ್ತೆ
 ಜಗಳವಾಗಿತ್ತು ಎಂದು ತಿಳಿದುಬಂದಿದೆ. ಭಾಗ್ಯಶ್ರೀ ಕುಟುಂಬದವರು ಕೊಲೆ ಆರೋಪ ಮಾಡಿ ಪ್ರವೀಣ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. ಕೊಲೆ ಮಾಡಿದ ಆರೋಪಿ ಪ್ರವೀಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಘಟನಾ ಸ್ಥಳಕ್ಕೆ ಎಸ್ ಪಿ ಸಿದ್ಧಾರ್ಥ ಗೋಯಲ್, ಹೆಚ್ಚುವರಿ ಎಸ್‌ಪಿ ಜಗದೀಶ ಎಂ, ಹಾಗೂ ಡಿವೈಎಸ್ಪಿ ಗಜಾನನ ಸುತಾರ, ಸಿಪಿಐ ಹಣಮಂತ ಸನಮನಿ ಭೇಟಿ ನೀಡಿದ್ದಾರೆ. ಬೀಳಗಿ ಪೊಲೀಸರು ತನಿಖೆ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್