LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನೂಲ್​ ಬಸ್ ದುರಂತದ ಬೆನ್ನಲ್ಲೇ ಕರ್ನಾಟಕ ಆರ್​ಟಿಒ ಭರ್ಜರಿ ಕಾರ್ಯಾಚರಣೆ

ದೇವನಹಳ್ಳಿ, ಅಕ್ಟೋಬರ್ 30: ಆಂಧ್ರ ಪ್ರದೇಶದ ಕರ್ನೂಲ್​ ಬಸ್ ದುರಂತದ ಬೆನ್ನಲ್ಲೇ ಕರ್ನಾಟಕ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಬಸ್​​ಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇದೀಗ ಆರ್​ಟಿಒ ಅಧಿಕಾರಿಗಳು ದೇವನಹಳ್ಳಿಯ ಏರ್​ಪೋರ್ಟ್ ಟೋಲ್ ಬಳಿ ಕಾರ್ಯಾಚರಣೆ ನಡೆಸಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಬಂದಿದ್ದ 40ಕ್ಕೂ ಹೆಚ್ಚು ಬಸ್‌ಗಳನ್ನು ಸೀಜ್ ಮಾಡಿದ್ದಾರೆ. ನಿರ್ದಿಷ್ಟವಾಗಿ, ನೇಪಾಳದಿಂದ ಜನರನ್ನು ಕರೆದುಕೊಂಡು ಬೆಂಗಳೂರಿಗೆ ಬರುತ್ತಿದ್ದ ಉತ್ತರ ಭಾರತದ ಸ್ಲೀಪರ್ ಕೋಚ್ ಬಸ್ ಒಂದನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 40-50 ಜನರ ಸಾಮರ್ಥ್ಯವಿರುವ ಈ ಬಸ್‌ನಲ್ಲಿ 100ಕ್ಕೂ ಅಧಿಕ ಪ್ರಯಾಣಿಕರನ್ನು ತುಂಬಿಕೊಂಡು ಬಂದಿರುವುದು ಕಾಣಿಸಿದೆ. ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಪ್ರಯಾಣಿಕರನ್ನು ‘ಕುರಿಗಳ ಮಂದೆ’ಯಂತೆ ತುಂಬಿಕೊಂಡು ಬರಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಅನ್ನು ಸೀಜ್ ಮಾಡಿದ ಅಧಿಕಾರಿಗಳು, ಈಗಾಗಲೇ ಇಂತಹ ಐದು ಬಸ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಸುಮಾರು 41 ಬಸ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್