LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಿಗೆ  ಕಠಿಣ ಕ್ರಮ ಕೈಗೊಳ್ಳಿ  : ಎ ಐ ಎಂ ಎಸ್ ಎಸ್ ಒತ್ತಾಯ







ಬಳ್ಳಾರಿ, ಮಾ.26.. ರಾಜ್ಯ ಮತ್ತು ದೇಶದಲ್ಲಿ ನಡೆಯುತ್ತಿರುವ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಕುರಿತು ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಎ ಐ ಎಮ್ ಎಸ್  ಎಸ್  ಸಂಘಟನೆಯ ಕೆಎಂ  ಈಶ್ವರಿ ಒತ್ತಾಯಿಸಿದರು.


 ಅವರು ಸಂಘಟನೆ ಹಮ್ಮಿಕೊಂಡಿರುವ ಮಹಿಳೆಯರ ದೌರ್ಜನ್ಯ ಪ್ರಕರಣಗಳ ವಿರುದ್ಧ

  ಸಮರ ಹೂಡಲು ರಾಜ್ಯವ್ಯಾಪಿ ಆಂದೋಲನದ ಸಮಾರೋಪ ಕಾರ್ಯಕ್ರಮದ ಭಾಗವಾಗಿ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ

ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ,


ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿಯು 25 ನವೆಂಬರ್ 2025 ರಿಂದ 25 ಮಾರ್ಚ್ 2026ರ ವರೆಗೆ ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಹೂಡಲು ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಹಿ ಸಂಗ್ರಹಣಾ ಅಭಿಯಾನವನ್ನು ಕ್ರಮ ಕೈಗೊಳ್ಳಲಾಗಿತ್ತು ಈ ನಮ್ಮ ಹೋರಾಟಕ್ಕೆ ಸಮಾಜದ ಚಿಂತಕರು ಹಾಗೂ ಪ್ರಗತಿಪರ ಹೋರಾಟಗಾರರು ನಮ್ಮ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ

 ಈ ಹೋರಾಟಕ್ಕೆ ಸ್ಪಂದಿಸಿದ  ಸರ್ಕಾರ ಕೆಲವು ಕಾರ್ಯ ಸೂಚಿಗಳನ್ನು ಮಾಡಿದೆ. ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಇವ ನಮ್ಮವ ಕಾಯ್ದೆಯನ್ನು ಜಾರಿಗೊಳಿಸಿದೆ, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿರ್ಬಂಧಿಸಿದೆ. ಈ ಕ್ರಮಗಳು ಸ್ವಾಗತಾರ್ಹ. ಇದು ಜನಾಭಿಪ್ರಾಯಕ್ಕೆ ಸಂದ ಜಯ. ಈ ಕಾನೂನುಗಳು  ಪರಿಣಾಮಕಾರಿಯಾಗಿ ತಳಮಟ್ಟದವರೆಗೂ ಕಾರ್ಯನಿರ್ವಹಿಸುವಂತೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.ಎಂದರು.

 ಈ ಸಂದರ್ಭದಲ್ಲಿ ಎ ಐ ಎಂ ಎಸ್ ಎಸ್ ನ  ಪದಾಧಿಕಾರಿಗಳಾದ ಗಿರಿಜಾ ವಿದ್ಯಾ ಶೋಭಾ ಸೌಮ್ಯ ಕರಿಬಸಮ್ಮ ವಿಜಯಲಕ್ಷ್ಮಿ, ಪದ್ಮ,  ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್