LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಿಳಾ ಒಳ ಕ್ರೀಡಾಂಗಣದ ಸ್ಥಾಪನೆಗಾಗಿ ಎಐಎಂಎಸ್‌ಎಸ್‌ನಿAದ ಮನವಿ 

ಬಳ್ಳಾರಿ:16: ಎಐಎಂಎಸ್‌ಎಸ್‌ನ ನಿಯೋಗವೊಂದು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮಹಿಳಾ ಒಳ ಕ್ರೀಡಾಂಗಣವನ್ನು ನಿರ್ಮಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಎಐಎಂಎಸ್‌ಎಸ್ ನ ಜಿಲ್ಲಾಧ್ಯಕ್ಷರಾದ ಶ್ರೀಮತಿ ಈಶ್ವರಿ ಕೆ. ಎಂ. ಮಾತನಾಡಿ "ಇತ್ತೀಚಿಗೆ ಜಿಲ್ಲಾಡಳಿತವು ಅನಧಿಕೃತ ಒತ್ತುವರಿ ಜಮೀನುಗಳನ್ನು ತೆರವುಗೊಳಿಸಿ ನಂತರ ಅವುಗಳನ್ನು ಸರ್ಕಾರಿ ಉದ್ದೇಶಗಳಿಗೆ  ಸರ್ಕಾರದ ಇಲಾಖೆಗಳ ಅಡಿಯಲ್ಲಿ ಜನರಿಗೆ ಅನುಕೂಲವಾಗುವ ಕಾರ್ಯಕ್ರಮ ರೂಪಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪತ್ರ ಬಿಡುಗಡೆ ಮಾಡಿದೆ. ಬಳ್ಳಾರಿ ತಾಲೂಕು,  ಬಳ್ಳಾರಿ ನಗರದ ವಾರ್ಡ್ ಸಂಖ್ಯೆ ೨೪, ಮುಸೋನಿಕ್ ಹಾಲ್, ವಿಸ್ತೀರ್ಣ ೪.೪೪ ಎಕರೆ ಜಮೀನಿನಲ್ಲಿ ೪ ಎಕರೆ ಜಮೀನನ್ನು ಮಹಿಳೆಯರ ಒಳ ಕ್ರೀಡಾಂಗಣ ಉದ್ದೇಶಕ್ಕೆ ಮೀಸಲಿಟ್ಟಿರುವುದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಬಳ್ಳಾರಿ ಜಿಲ್ಲಾ ಸಮಿತಿಯು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ.  
ಉದ್ದೇಶಿತ ಒಳ ಕ್ರೀಡಾಂಗಣದ ನಿರ್ಮಾಣವನ್ನು ಪ್ರಾರಂಭಿಸಬೇಕು. ಜೊತೆಗೆ ಈಜುಕೊಳವನ್ನು ನಿರ್ಮಿಸಬೇಕು. ಜೊತೆಯೆಲ್ಲೇ ಮಹಿಳೆಯರಿಗಾಗಿ ಜಿಮ್ ನ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರೀಡಾ ಸಾಮಗ್ರಿಗಳನ್ನು ಹಾಗೂ ವ್ಯಾಯಾಮ ಉಪಕರಣಗಳನ್ನು ಒದಗಿಸಿ ನಗರದ ಮಹಿಳೆಯರಿಗೆ ಅನುಕೂಲ ಮಾಡಿ ಕೊಡಬೇಕು. ಹಾಗೆಯೇ ಇದೇ ಆವರಣದಲ್ಲಿ ಮಹಿಳೆಯರಿಗಾಗಿ ಉದ್ಯಾನವನ, ಸಭಾಂಗಣ ಮತ್ತು ಗ್ರಂಥಾಲಯವನ್ನು ಸ್ಥಾಪಿಸಿದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಕ್ರಮಗಳನ್ನು ಕೈಗೊಳ್ಳಬೇಕು" ಎಂದು ಮನವಿ ಮಾಡಿದರು. 
ನಿಯೋಗದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ವಿಜಯಲಕ್ಷ್ಮಿ, ಸೌಮ್ಯ, ವಿದ್ಯಾ, ರೇಖಾ, ಅಭಿಲಾಷ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್