LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಐನಾಪುರ

ಐನಾಪುರ-ಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಾಲಾ ಕಟ್ಟಡ, ಗಟಾರೀಕರಣ ಕಾಮಗಾರಿ ಗಳಂತಹ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನಗಳನ್ನು ಬಿಡುಗಡೆಗೊಳಿಸುವುದಾಗಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. 

       ಅವರು ಗುರುವಾರ ದಿನಾಂಕ 16 ರಂದು ಐನಾಪುರದ ಇಂದಿರಾನಗರ ಬಡಾವಣೆಯಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ 50 ಲಕ್ಷ ರೂ ಸಿಸಿ ರಸ್ತೆ ಹಾಗೂ ಗಠಾರಿಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷವು ಜನರ ಪರವಾಗಿ ಕೆಲಸ ಮಾಡುತ್ತಿದ್ದು ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಜನರಿಗೆ ಲಾಭವಾಗಿದೆ ಇದನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗುತ್ತೇವೆ , ಡಾ ಅಂಬೇಡ್ಕರ್ ರವರು ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದ್ದಾರೆ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂದು ಕರೆ ನೀಡಿದರು. 
     ಈ ಸಂದರ್ಭದಲ್ಲಿ ರಮೇಶ್ ಸಿಂದಗಿ, ಮುಖ್ಯಾಧಿಕಾರಿ ಮಹಾಂತೇಶ್ ಕೌಲಾಪುರೆ, ಸಚಿನ್ ಬುಟಾಳಿ, ಉಮೇಶ್ ಪಾಟೀಲ್, ಸುದರ್ಶನ್ ಜಂತನ್ನವರ್, ಸುರೇಶ್ ಗಾಣಿಗೇರ್, ದಾದಾ ಜಂತಣ್ಣವರ್, ಅಭಿಯಂತರರಾದ ಸದಾಶಿವ್ ಗುರವ್, ವೀರೇಶ್ ಬಿಸ್ತಗೌಡ, ಸಿದ್ದಾರೂಡ ನ್ಯಾಮಗೌಡ, ಶುಭಂ ಪಾಟೀಲ್, ರಮೇಶ್ ಪೂಜಾರಿ, ಪರಶುರಾಮ ನಾಯಕ್, ಸಹದೇವ ನಾಯಕ್, ಉದಯ್ ನಾಯಕ್, ಹನುಮಂತ ನಾಯಕ್, ಸತ್ಯಪ್ಪ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಫೋಟೋ ಶೀರ್ಷಿಕೆ 16 ಐನಾಪುರ 1 ಐನಾಪುರ್ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಸಿಸಿ ರಸ್ತೆ ಗಠಾರಿಕರಣ ಕಾಮಗಾರಿಗೆ ಚಿಕ್ಕೋಡಿ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಗುದ್ದಲಿ ಪೂಜೆ ನೆರವೇರಿಸಿದರು, ಈ ವೇಳೆ ರಮೇಶ್ ಸಿಂದಗಿ, ಮಹಾಂತೇಶ್ ಕೌಲಾಪುರೆ, ಉಮೇಶ್ ಪಾಟೀಲ್, ಸುದರ್ಶನ ಜಂತನ್ನವರ್ ಅವರನ್ನು ಚಿತ್ರದಲ್ಲಿ ಕಾಣಬಹುದು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್